Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:36 - ಕನ್ನಡ ಸತ್ಯವೇದವು C.L. Bible (BSI)

36 ಇಸ್ರಯೇಲಿನ ದೇವನಾದ ಸರ್ವೇಶಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್,’ ಸರ್ವೇಶ್ವರನಿಗೆ ಸ್ತೋತ್ರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಇಸ್ರಾಯೇಲ್‍ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ ಎಂಬದೇ. ಅವರು ಹೀಗೆ ಹಾಡಿದ್ದಕ್ಕೆ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ! ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ, ಜನರೆಲ್ಲರೂ, “ಆಮೆನ್,” ಎಂದು ಹೇಳಲಿ. ನೀವು, “ಯೆಹೋವ ದೇವರನ್ನು ಸ್ತುತಿಸಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:36
12 ತಿಳಿವುಗಳ ಹೋಲಿಕೆ  

“ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ಎಜ್ರನು ಪರಾತ್ಪರ ದೇವರಾದ ಸರ್ವೇಶ್ವರನನ್ನು ಸ್ತುತಿಸಿದಾಗ ಸರ್ವಜನರೂ ತಮ್ಮ ಕೈಗಳನ್ನೆತ್ತಿ ‘ಆಮೆನ್, ಆಮೆನ್’ ಎಂದು ಹೇಳಿ ನೆಲದಮಟ್ಟಿಗೂ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದರು.


“ತಾವು ವಾಗ್ದಾನ ಮಾಡಿದಂತೆ ತಮ್ಮ ಪ್ರಜೆಗಳಾದ ಇಸ್ರಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ತಮ್ಮ ದಾಸ ಮೋಶೆಯ ಮುಖಾಂತರ ಮಾಡಿದ ಅತಿಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಸಭೆಯಲ್ಲಿ ನೀನು ಆತ್ಮದಿಂದ ಮಾತ್ರ ದೇವರ ಸ್ತುತಿಮಾಡಿದರೆ ನಿನ್ನ ಹಾಗೆ ಪರವಶನಲ್ಲದವನು ನಿನ್ನ ಕೃತಜ್ಞತಾ ಸ್ತುತಿಗೆ ‘ಆಮೆನ್’ ಎಂದು ಹೇಗೆ ತಾನೇ ಹೇಳಬಲ್ಲನು? ನೀನು ಹೇಳುವುದೇ ಅವನಿಗೆ ತಿಳಿಯುವುದಿಲ್ಲವಲ್ಲಾ!


“ಆಮೆನ್! ಸರ್ವೇಶ್ವರ ಹಾಗೆಯೇ ಮಾಡಲಿ! ಸರ್ವೇಶ್ವರ ತಮ್ಮ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬಿಲೋನಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಲಿ. ನೀನು ನುಡಿದ ಮಾತುಗಳನ್ನು ನೆರವೇರಿಸಲಿ!


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ಇಸ್ರಯೇಲಿನ ದೇವನಾದ ಪ್ರಭುವಿಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್’, ಪ್ರಭುವಿಗೆ ಸ್ತೋತ್ರ II


ಹೇ ಪ್ರಭು, ನಮ್ಮ ದೇವಾ, ನಮ್ಮನ್ನುದ್ಧರಿಸು I ನಾಡುನಾಡುಗಳಿಂದ ನಮ್ಮನೊಂದುಗೂಡಿಸು I ನಿನ್ನ ಪವಿತ್ರ ನಾಮವನು ನಾವು ಭಜಿಸುವೆವು I ನಿನ್ನ ಸ್ತುತಿ ಸ್ತೋತ್ರಗಳಲಿ ಹೆಚ್ಚಳ ಪಡುವೆವು II


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು