Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:39 - ಕನ್ನಡ ಸತ್ಯವೇದವು C.L. Bible (BSI)

39 ಯಾಜಕ ಚಾದೋಕ ಮತ್ತು ಅವನ ಜೊತೆ ಯಾಜಕರು ಗಿಬ್ಯೋನಿನಲ್ಲಿದ್ದ ಸರ್ವೇಶ್ವರನ ಗುಡಾರದಲ್ಲಿ ಆರಾಧನೆಯನ್ನು ನಡೆಸಲು ನೇಮಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಯಾಜಕನಾದ ಚಾದೋಕನನ್ನೂ, ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಯಾಜಕನಾದ ಚಾದೋಕನನ್ನೂ ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಗಿಬ್ಯೋನಿನ ಉನ್ನತಸ್ಥಳದಲ್ಲಿದ್ದ ದೇವದರ್ಶನ ಗುಡಾರದಲ್ಲಿ ಸೇವೆಮಾಡಲು ದಾವೀದನು ಚಾದೋಕನನ್ನು ಮತ್ತು ಇತರ ಯಾಜಕರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಲ್ಲಿ ಯೆಹೋವ ದೇವರ ಗುಡಾರದ ಮುಂದೆ ಸೇವೆಮಾಡುವದಕ್ಕೆ ದಾವೀದನು ಯಾಜಕನಾದ ಚಾದೋಕನನ್ನೂ ಮತ್ತು ಅವನ ಸಹೋದರರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:39
8 ತಿಳಿವುಗಳ ಹೋಲಿಕೆ  

ಒಮ್ಮೆ ಅರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿನ ಪೀಠದ ಮೇಲೆ ಸಹಸ್ರಬಲಿಗಳನ್ನು ಸಮರ್ಪಿಸಿದಾಗ,


ದಾವೀದನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರೆಂಬುವರನ್ನು ಕರೆಯಿಸಿದನು; ಅಂತೆಯೇ ಲೇವಿಯರಾದ ಊರಿಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೋಲ್ ಮತ್ತು ಅಮ್ಮೀನಾದಾಬ್ ಎಂಬವರನ್ನೂ ಕರೆಯಿಸಿದನು.


ಆಮೇಲೆ ಅರಸ ಸೊಲೊಮೋನನು ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದ ದೇವದರ್ಶನದ ಗುಡಾರದಿಂದ ಜೆರುಸಲೇಮಿಗೆ ಬಂದು ಇಸ್ರಯೇಲ್ ರಾಜ್ಯವನ್ನು ಆಳಿದನು.


ಆದರೂ ದಾವೀದನು ಸರ್ವೇಶ್ವರನ ದೂತ ಹಿಡಿದಿದ್ದ ಕತ್ತಿಗೆ ಹೆದರಿ, ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಬಲಿಯರ್ಪಿಸಿದನು.


ಪರಾಕ್ರಮಶಾಲಿಯಾದ ಯುವಕ ಚಾದೋಕ ಮತ್ತು ಅವನ ಬಂಧುಗಳಾದ 22 ಮಂದಿ ಅಧಿಪತಿಗಳು;


ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು.


ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು