Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:42 - ಕನ್ನಡ ಸತ್ಯವೇದವು C.L. Bible (BSI)

42 ಸ್ತುತಿಗೀತೆಗಳನ್ನು ಹಾಡುವಾಗ ತುತೂರಿ, ತಾಳ, ಮತ್ತಿತರ ವಾದ್ಯಗಳನ್ನು ಬಾರಿಸುವವರ ಮೇಲ್ವಿಚಾರಣೆಯೂ ಹೇಮಾನ್ ಮತ್ತು ಯೆದುತೂನರದಾಗಿತ್ತು. ಯೆದುತೂನನ ಮಕ್ಕಳಿಗೆ ದ್ವಾರಗಳನ್ನು ಕಾಯುವ ಹೊಣೆಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಹೇಮಾನ್‍ಯೆದುತೂನರ ಹತ್ತಿರ ವಾದ್ಯಗಾರರಿಗೋಸ್ಕರ ತುತೂರಿ ತಾಳ ಮೊದಲಾದ ದೇವಕೀರ್ತನಾಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳೂ ದ್ವಾರಪಾಲಕರಾಗಿ ನೇವಿುಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅದರ ಸಂಗಡ ತುತೂರಿ ಊದಲು, ತಾಳ ಬಾರಿಸಲು, ದೇವರ ಗೀತವಾದ್ಯಗಳೂ ಸಹಿತವಾಗಿ ಹೇಮಾನನೂ, ಯೆದುತೂನನೂ ಮೇಲ್ವಿಚಾರಕರಾಗಿದ್ದರು. ಯೆದುತೂನನ ಪುತ್ರರು ದ್ವಾರಪಾಲಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:42
8 ತಿಳಿವುಗಳ ಹೋಲಿಕೆ  

ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಸರ್ವೇಶ್ವರನ ಗಾಯನಸೇವೆಗಾಗಿ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿ ಇದ್ದವು. ಇವರು ರಾಜಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡೆಸುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಯನ್ನು ಸಮರ್ಪಿಸಿರಿ; ಅವರ ಅಚಲಪ್ರೀತಿ ಶಾಶ್ವತ” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಯೇಲರೆಲ್ಲರೂ ನಿಂತಿದ್ದರು.


ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಇವರು ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ, ಸರ್ವೇಶ್ವರನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿ ಸಹಾಯಕರು.


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.


ಗಾಯಕರ ಮಂಡಳಿಯಿಂದ ಕಂಚಿನ ತಾಳಗಳನ್ನು ಬಾರಿಸಲು ಆಯ್ಕೆಹೊಂದಿದವರು: ಯೋವೇಲನ ಮಗ ಹೇಮಾನ್, ಅವನ ಬಂಧು ಬೆರೆಕ್ಯನ ಮಗ ಆಸಾಫ್, ಮೆರಾರೀ ಕುಟುಂಬಕ್ಕೆ ಸೇರಿದ ಕೂಷಾಯನ ಮಗ ಏತಾನ್ ಎಂಬವರು. ತಮಗೆ ಸಹಾಯ ಮಾಡಲು ತಾರಸ್ಥಾಯಿಯ ತಂತಿವಾದ್ಯಗಳನ್ನು ಬಾರಿಸಲು ಜೆಕರ್ಯ, ಬೇನ್, ಯಾಜೀಯೇಲ್, ಶಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ ಹಾಗು ಮಸೇಯ ಎಂಬವರನ್ನು ಆರಿಸಿಕೊಂಡರು. ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸಲು ಮತಿತ್ಯ, ಎಲೀಫೆಲೇಹು, ಮಿಕ್ನೇಯ, ದೇವಾಲಯದ ದ್ವಾರಪಾಲಕರಾದ ಓಬೇದೆದೋಮ್ ಮತ್ತು ಯೆಗೀಯೇಲರನ್ನೂ ನೇಮಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು