Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:9 - ಕನ್ನಡ ಸತ್ಯವೇದವು C.L. Bible (BSI)

9 ಹಾಡಿ ಪಾಡಿ ಹೊಗಳಿರಿ ಆತನನು I ಧ್ಯಾನಿಸಿ ಆತನ ಪವಾಡಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನಿಗೆ ಗಾನ ಮಾಡಿರಿ, ಆತನಿಗೆ ಸ್ತುತಿಗೀತೆ ಹಾಡಿರಿ. ಆತನ ಅದ್ಭುತಕಾರ್ಯಗಳನ್ನು ಧ್ಯಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ, ದೇವರ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:9
16 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.


ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.


ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ.


ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ? I ನಿನ್ನ ಅದ್ಭುತಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ II


ಬಚ್ಚಿಟ್ಟುಕೊಳ್ಳಲಿಲ್ಲ ನನ್ನೆದೆಯೊಳು ನಿನ್ನ ಸತ್ಸಂಬಂಧವನು I ಪ್ರಕಟಿಸಿದೆನು ಜೀವೋದ್ಧಾರವನು, ನಿನ್ನ ಪ್ರಾಮಾಣಿಕತೆಯನು I ಮಹಾಸಭೆಗೆ ಮರೆಯಿಸದೆ ಸಾರಿದೆನು ನಿನ್ನ ಪ್ರೀತಿ ಸತ್ಯತೆಯನು II


ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.


ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು I ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು II


ಸಲ್ಲಿಸಿ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರವನು I ಮಾಡಿರಿ ಆತನ ನಾಮಸ್ಮರಣೆಯನು I ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II


ಹೆಮ್ಮೆಪಡಿ, ನೆನೆದು ಆತನ ಶ್ರೀನಾಮವನು I ಹಿಗ್ಗಲಿ ಹೃದಯ, ಕೋರಿ ಆತನ ದರ್ಶನವನು II


ಮಾನವರು ಸ್ತುತಿಸಿರುವ ಆತನ ಕಾರ್ಯಗಳನ್ನ ನೀನೂ ಕೂಡ ಹೊಗಳಲು ಮರೆಯಬೆಡ.


ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು