Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:1 - ಕನ್ನಡ ಸತ್ಯವೇದವು C.L. Bible (BSI)

1 ಆಗ ಅರಸ ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ಯೆಹೋವನ ನಿಬಂಧನ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನು ತನ್ನ ಮನೆಗೆ ಹಿಂತಿರುಗಿದ ಬಳಿಕ ಪ್ರವಾದಿಯಾದ ನಾತಾನನಿಗೆ, “ನಾನು ದೇವದಾರು ಮರಗಳಿಂದ ಮಾಡಿದ ಮನೆಯಲ್ಲಿ ವಾಸಮಾಡುತ್ತಿರುವಾಗ ದೇವರ ಒಡಂಬಡಿಕೆಯ ಪೆಟ್ಟಿಗೆಯು ಗುಡಾರದೊಳಗೆ ಇಡಲ್ಪಟ್ಟಿದೆ. ದೇವರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿರುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ, ಒಂದು ದಿನ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:1
28 ತಿಳಿವುಗಳ ಹೋಲಿಕೆ  

“ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬಾರದು.


ದಾವೀದ ನಗರದಲ್ಲಿ ದಾವೀದನು ತನ್ನ ವೈಯಕ್ತಿಕ ಉಪಯೋಗಕ್ಕಾಗಿ ಮನೆಗಳನ್ನು ಕಟ್ಟಿಸಿಕೊಂಡನು. ದೇವಮಂಜೂಷಕ್ಕೂ ಒಂದು ಸ್ಥಳವನ್ನು ಸಿದ್ಧಪಡಿಸಿ ಅದಕ್ಕೆ ಒಂದು ಗುಡಾರವನ್ನು ಹಾಕಿಸಿದನು.


ನೀವು ನಿರೀಕ್ಷಿಸಿದ್ದು ಸಮೃದ್ಧಿ ಸುಗ್ಗಿ. ಆದರೆ ಸಿಕ್ಕಿದ್ದು ಕಿಂಚಿತ್ತು ಮಾತ್ರ; ಅದನ್ನು ಮನೆಗೆ ತಂದಾಗ ನಾನದನ್ನು ಗಾಳಿಗೆ ತೂರಿಬಿಟ್ಟೆ. ಇದಕ್ಕೆ ಕಾರಣವೇನು?” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. “ಕಾರಣವೇನೆಂದರೆ ನನ್ನ ಆಲಯ ಪಾಳುಬಿದ್ದಿರುವಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸ್ವಂತ ಮನೆಯ ಕೆಲಸದಲ್ಲಿ ಮಗ್ನನಾಗಿದ್ದಾನೆ.


“ನನ್ನ ಆಲಯ ಹಾಳುಬಿದ್ದಿರುವಾಗ ನೀವು ಸೊಗಸಾದ ಹಲಗೆ ಹೊದಿಸಿದ ಮನೆಗಳಲ್ಲಿ ವಾಸಿಸುವುದು ಸರಿಯೋ?


“ನೆಬೂಕದ್ನೆಚ್ಚರನಾದ ನಾನು ನನ್ನ ಅರಮನೆಯಲ್ಲಿ ಸುಖವಾಗಿದ್ದೆ. ನನ್ನ ರಾಜಭವನದಲ್ಲಿ ನೆಮ್ಮದಿಯಿಂದ ಇದ್ದೆ.


ದೇವದಾರಿನ ಕೆಲಸದಲ್ಲಿ, ಬೇರೆಯವರನ್ನು ಮೀರಿಸುವುದರಲ್ಲಿ ಅಡಗಿದೆಯೇ ನಿನ್ನ ದೊರೆತನದ ಹಿರಿಮೆ? ನಿನ್ನ ತಂದೆ ಎಷ್ಟೇ ಕುಡಿದರೂ ತಿಂದರೂ ನ್ಯಾಯನೀತಿಯನ್ನು ಪಾಲಿಸುತ್ತಿದ್ದನಲ್ಲವೆ? ಆಗ ಅವನಿಗೆ ಎಲ್ಲವು ನೆಮ್ಮದಿಯಾಗಿತ್ತಲ್ಲವೆ?


ಮುಚ್ಚೆನು ನಾನು ಕಣ್ಣುಗಳನು I ಕೂಡಿಸೆನು ನಾನು ರೆಪ್ಪೆಗಳನು” II


ದಾವೀದನು ದೇವರ ಮಂಜೂಷವನ್ನು, ಈಗಾಗಲೇ ಕಿರ್ಯತ್ಯಾರೀಮಿನಿಂದ ತಾನು ಜೆರುಸಲೇಮಿನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿದ್ದ ಗುಡಾರಕ್ಕೆ, ತೆಗೆದುಕೊಂಡು ಬಂದಿದ್ದನು.


ದಾವೀದನ ಪೂರ್ವೋತ್ತರ ಚರಿತ್ರೆ, ಅವನ ಆಳ್ವಿಕೆ, ಪರಾಕ್ರಮ ಹಾಗೂ ಅವನಿಗೂ ಇಸ್ರಯೇಲರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖ-ದುಃಖ, ಇವುಗಳ ವರದಿಯು


ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕಾಗಿ ಸಿದ್ಧಪಡಿಸಿದ್ದ ಗುಡಾರದೊಳಗೆ ಒಯ್ದು, ಅಲ್ಲಿ ಅದನ್ನು ಸ್ಥಾಪಿಸಿದರು. ದೇವರಿಗೆ ದಹನಬಲಿಗಳನ್ನೂ, ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದರು.


ಟೈರಿನ ಅರಸ ಹೀರಾಮನು ದಾವೀದನ ಬಳಿಗೆ ತನ್ನ ವಾಣಿಜ್ಯ ನಿಯೋಗವನ್ನು ಕಳುಹಿಸಿದನು. ಅರಮನೆಯನ್ನು ಕಟ್ಟಲು ಅವನಿಗೆ ದೇವದಾರು ಮರದ ದಿಮ್ಮಿಗಳನ್ನು, ಶಿಲ್ಪಿಗಳನ್ನು ಹಾಗು ಬಡಗಿಯವರನ್ನು ಕಳುಹಿಸಿಕೊಟ್ಟನು.


ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಇವರನ್ನೂ ಕೆರೇತ್ಯ-ಪೆಲೇತ್ಯರನ್ನೂ ಅರಸರು ಅವನ ಜೊತೆಯಲ್ಲಿ ಕಳುಹಿಸಿದ್ದಾರೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.


ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗ ನಮಸ್ಕಾರ ಮಾಡಿದನು.


ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.


ಪ್ರವಾದಿ ನಾತಾನನು, ಸರ್ವೇಶ್ವರನಿಂದ ಪಡೆದ ಆಜ್ಞೆಯಂತೆ ಅವರಿಗೋಸ್ಕರ, ಆ ಹುಡುಗನಿಗೆ ‘ಯೆದೀದ್ಯ’ ಎಂದು ಹೆಸರಿಟ್ಟನು.


ಸರ್ವೇಶ್ವರಸ್ವಾಮಿ ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಹೀಗೆಂದು ಹೇಳಿದನು: “ಒಂದು ಊರಲ್ಲಿ ಇಬ್ಬರು ವ್ಯಕ್ತಿಗಳಿದ್ದರು. ಒಬ್ಬನು ಐಶ್ವರ್ಯವಂತ, ಇನ್ನೊಬ್ಬನು ಬಡವ.


ಜನರು ಸರ್ವೇಶ್ವರನ ಮಂಜೂಷವನ್ನು ತಂದು ದಾವೀದನು ಕಟ್ಟಿಸಿದ್ದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿ ಇಟ್ಟರು; ಆಗ ದಾವೀದನು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದನು.


ದೈವಾನುಗ್ರಹಕ್ಕೆ ಪಾತ್ರನಾದ ದಾವೀದನು ಯಕೋಬನ ದೇವರಿಗೆ ಆಲಯವೊಂದನ್ನು ಕಟ್ಟಲು ಅಪ್ಪಣೆಯಾಗಬೇಕೆಂದು ಬೇಡಿಕೊಂಡನು.


ನನ್ನ ತಂದೆ ದಾವೀದನು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದಾಗ,


ಒಂದು ದಿನ ಅವನು ಪ್ರವಾದಿ ನಾತಾನನನ್ನು ಬರಮಾಡಿ, “ನೋಡು, ನಾನು ವಾಸಮಾಡುತ್ತಾ ಇರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ; ಆದರೆ ಸರ್ವೇಶ್ವರನ ನಿಬಂಧನ ಮಂಜೂಷವಿರುವುದು ಬಟ್ಟೆಯಿಂದ ಮಾಡಿದ ಗುಡಾರದಲ್ಲಿ!” ಎಂದನು.


ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ದೇವಾಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದೆ.


ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.


“ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮಾತ್ಕಾರವಾಗಿ ಕಸೂತಿ ಹಾಕಿಸಬೇಕು.


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನನ್ನು ಕರೆಯಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ದೇವಾಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು