Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:10 - ಕನ್ನಡ ಸತ್ಯವೇದವು C.L. Bible (BSI)

10 ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚೆಗೆ ಇಸ್ರಯೇಲರು ಶೋಷಣೆಗೆ ಗುರಿಯಾಗದಂತೆ ಇನ್ನು ಗುರಿಯಾಗರು. ನಿನ್ನ ಶತ್ರುಗಳನ್ನೆಲ್ಲ ನಿನಗೆ ಅಧೀನಮಾಡುವೆನು. ಅದು ಮಾತ್ರವಲ್ಲ, ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತುಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪೂರ್ವಕಾಲದಲ್ಲೂ, ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೆ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನಿನ್ನ ಶತ್ರುಗಳನ್ನು ನಿನಗೆ ಅಧೀನಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನು ಎಂದು ಮಾತುಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನೇವಿುಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವದಿಲ್ಲ. ನಿನ್ನ ಶತ್ರುಗಳೆಲ್ಲರನ್ನೂ ನಿನಗೆ ಅಧೀನಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನು ಎಂದು ಮಾತುಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರನ್ನು ಸಂರಕ್ಷಿಸಲು ನಾನು ನಾಯಕರನ್ನು ಎಬ್ಬಿಸುವೆನು; ನಾನು ನಿನ್ನ ವೈರಿಗಳನ್ನೆಲ್ಲಾ ಸೋಲಿಸಿಬಿಡುವೆನು. “‘ನಿನ್ನ ಮನೆತನವನ್ನು ನಾನು ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದೆ. ಆ ದಿವಸದಿಂದ ಈಚೆಗೆ, ದುಷ್ಟರು ಇನ್ನು ಮೇಲೆ ಇಸ್ರಾಯೇಲರನ್ನು ಕುಗ್ಗಿಸದೆ ಇರುವರು. ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. “ ‘ಯೆಹೋವ ದೇವರಾದ ನಾನು ನಿನಗೆ ಮನೆಯನ್ನು ಕಟ್ಟುವೆನು, ಎಂದು ನಿನಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:10
16 ತಿಳಿವುಗಳ ಹೋಲಿಕೆ  

ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚೆಗೆ ಇಸ್ರಯೇಲರು ಶೋಷಣೆಗೆ ಗುರಿಯಾದರು. ಆದರೆ ಇನ್ನು ಮೇಲೆ ಆಗದು. ನೀನು ಶತ್ರುಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಅದು ಮಾತ್ರ ಅಲ್ಲ. ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.


ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


ಅವನ ಶತ್ರುಗಳನು ಸದೆಬಡಿವೆನು ಅವನ ಮುಂದೆಯೆ I ಅವನ ವಿರೋಧಿಗಳನು ಹತಮಾಡುವೆನು ಅಲ್ಲಿಯೇ II


ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.


ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು.


ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ಅಲ್ಲೇ ವಾಸಿಸುವರು.


ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು