Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:12 - ಕನ್ನಡ ಸತ್ಯವೇದವು C.L. Bible (BSI)

12 ನನಗಾಗಿ ಒಂದು ದೇವಾಲಯವನ್ನು ಕಟ್ಟುವವನು ಅವನೇ. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ನನಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ನನಗಾಗಿ ಒಂದು ಮನೆಯನ್ನು ಕಟ್ಟುವನು; ನಾನು ಅವನ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಮಗನು ನನಗೆ ಆಲಯವನ್ನು ಕಟ್ಟುವನು. ನಿನ್ನ ಮಗನ ವಂಶವು ಸದಾಕಾಲಕ್ಕೂ ಇಸ್ರೇಲ್ ಜನಾಂಗವನ್ನು ಆಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನೇ ನನಗೆ ದೇವಾಲಯವನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:12
21 ತಿಳಿವುಗಳ ಹೋಲಿಕೆ  

ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಸರ್ವೇಶ್ವರ ನನ್ನ ತಂದೆ ದಾವೀದನಿಗೆ, ‘ನಾನು ನಿನ್ನ ಸ್ಥಾನದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗ, ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ,’ ಎಂದು ಹೇಳಿದ್ದರು. ಆದುದರಿಂದ ನಾನು ನನ್ನ ದೇವರಾದ ಸರ್ವೇಶ್ವರನಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.


ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


ಉಳಿಸುವೆನು ಅವನ ಸಂತಾನವನು ನಿರಂತರವಾಗಿ I ಅವನ ಸಿಂಹಾಸನವಿರುವುದು ಗಗನದಂತೆ ಸ್ಥಿರವಾಗಿ II


“ಸ್ಥಾಪಿಸುವೆ ಶಾಶ್ವತವಾಗಿ ನಿನ್ನ ಸಂತತಿಯನು I ಸ್ಥಿರಪಡಿಸುವೆ ಯುಗಯುಗಕು ನಿನ್ನ ಸಿಂಹಾಸನವನು” II


ಅವರು ನಮಗೆ, ನಾವು ಪರಲೋಕ ಭೂಲೋಕಗಳ ದೇವರ ದಾಸರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ತಿರುಗಿ ಕಟ್ಟುತ್ತಿದ್ದೇವೆ. ಇಸ್ರಯೇಲರ ಒಬ್ಬ ಮಹಾರಾಜನು ಇದನ್ನು ಕಟ್ಟಿಮುಗಿಸಿದ್ದನು.


ಆದರೆ ಅದನ್ನು ಕಟ್ಟಬೇಕಾದವನು ನೀನಲ್ಲ; ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದರು.


ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಇದ್ದವನನ್ನು ನನ್ನ ಕೃಪೆ ಬಿಟ್ಟು ಹೋಗದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ.


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ಪ್ರಸಿದ್ಧಪಡಿಸುವುದು ಪ್ರಭು, ಗಗನವು ನಿನ್ನ ಮಹತ್ತನು I ಸಂಕೀರ್ತಿಸುವುದು ಸ್ವರ್ಗೀಯ ಸಭೆ, ನಿನ್ನ ಸತ್ಯತೆಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು