Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:19 - ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರಾ, ನಿಮ್ಮ ದಾಸನಾದ ನನ್ನ ಹಿತಕ್ಕಾಗಿಯೂ ತಮ್ಮ ಚಿತ್ತಾನುಸಾರವಾಗಿಯೂ ಈ ಮಹತ್ಕಾರ್ಯಗಳನ್ನೆಲ್ಲಾ ನಡೆಸಿ ನಿಮ್ಮ ಸರ್ವಮಹತ್ವವನ್ನು ತೋರ್ಪಡಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನೇ, ನಿನ್ನ ಸೇವಕನ ಮೇಲಿಗಾಗಿಯೂ, ನಿನ್ನ ಚಿತ್ತಾನುಸಾರವಾಗಿಯೂ ಈ ಎಲ್ಲಾ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ಸತ್ಯ ಮಹತ್ವವನ್ನು ತೋರ್ಪಡಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನೇ, ನಿನ್ನ ಸೇವಕನ ಮೇಲಿಗಾಗಿಯೂ ನಿನ್ನ ಚಿತ್ತಾನುಸಾರವಾಗಿಯೂ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ ನಿನ್ನ ಸರ್ವ ಮಹತ್ವವನ್ನು ತೋರ್ಪಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ನಿನ್ನ ಚಿತ್ತಕ್ಕನುಸಾರವಾಗಿ ಇಂಥ ಮಹತ್ಕಾರ್ಯವನ್ನು ನೀನು ನನಗೋಸ್ಕರ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರೇ, ನಿಮ್ಮ ಸೇವಕನ ನಿಮಿತ್ತವಾಗಿಯೂ, ನಿಮ್ಮ ಚಿತ್ತಾನುಸಾರವಾಗಿಯೂ ಈ ಮಹಾಕಾರ್ಯಗಳನ್ನೆಲ್ಲಾ ನಡೆಸಿ, ಎಲ್ಲ ವಾಗ್ದಾನಗಳನ್ನು ತಿಳಿಯಪಡಿಸಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:19
15 ತಿಳಿವುಗಳ ಹೋಲಿಕೆ  

ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು.


ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.


ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಓ ನಮ್ಮ ದೇವರೇ, ನಿಮ್ಮ ದಾಸನ ಪ್ರಾರ್ಥನೆ ವಿಜ್ಞಾಪನೆಗಳನ್ನು ಈಗ ಆಲಿಸಿರಿ. ಹಾಳಾಗಿರುವ ನಿಮ್ಮ ಪವಿತ್ರಾಲಯವನ್ನು ಸರ್ವೇಶ್ವರ ಎಂಬ ನಿಮ್ಮ ಹೆಸರಿನ ನಿಮಿತ್ತವೇ ಪ್ರಸನ್ನ ಮುಖದಿಂದ ನೋಡಿ.


ಆತನೆನಗೆ ಇಂತೆಂದ : “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.”


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ತನ್ನ ಪ್ರಜೆಗಿತ್ತಿಹನು ಅನ್ಯಜನರ ಸೊತ್ತನು I ತೋರ್ಪಡಿಸಿಹನು ಈ ಪರಿ ತನ್ನ ಸಾಮರ್ಥ್ಯವನು II


ಘನತೆ ಗೌರವವುಳ್ಳವು ಆತನ ಎಲ್ಲ ಕಾರ್ಯ I ನಿಲ್ಲುವುದು ಆತನ ನ್ಯಾಯನೀತಿಯು ನಿತ್ಯ II


ತಮ್ಮ ಸಂಕಲ್ಪ ಹಾಗೂ ದಯಾನುಸಾರ ಎಂತೆಂಥಾ ಮಹತ್ಕಾರ್ಯವನ್ನು ನಡೆಸಿದಿರಿ! ಅವುಗಳ ಅನುಭವವನ್ನೂ ನಿಮ್ಮ ದಾಸನಿಗಿತ್ತಿರಿ!


ನೀವು ನಿಮ್ಮ ದಾಸ ದಾವೀದನನ್ನು ಚೆನ್ನಾಗಿ ಬಲ್ಲಿರಿ; ನಾನು ನನ್ನ ಘನತೆಯನ್ನು ಕುರಿತು ಇನ್ನೇನು ಹೇಳಲಿ?


ಸರ್ವೇಶ್ವರಾ, ತಮಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದಂಥವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ತಮ್ಮ ಹೊರತು, ಬೇರಾವ ದೇವರೂ ಇಲ್ಲ ಎಂಬುದು ನಿಶ್ಚಯ.


ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು