Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:22 - ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಸ್ರಾಯೇಲರು ಸದಾಕಾಲವು ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದ್ದೀ. ಯೆಹೋವನೇ, ನೀನು ಅವರಿಗೆ ದೇವರಾಗಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಸ್ರಾಯೇಲ್ಯರು ಸದಾಕಾಲವೂ ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿ; ಯೆಹೋವನೇ, ನೀನು ಅವರಿಗೆ ದೇವರಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲರನ್ನು ಸದಾಕಾಲಕ್ಕೂ ನಿನ್ನ ಜನರನ್ನಾಗಿ ಮಾಡಿಕೊಂಡೆ. ಯೆಹೋವನೇ, ನೀನೇ ಅವರಿಗೆ ದೇವರಾದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ಇಸ್ರಾಯೇಲ್ ಜನರನ್ನು ಶಾಶ್ವತವಾಗಿ ನಿಮ್ಮ ಸ್ವಂತ ಜನರಾಗಿ ಮಾಡಿದಿರಿ; ಯೆಹೋವ ದೇವರೇ, ನೀವೇ ಅವರಿಗೆ ದೇವರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:22
15 ತಿಳಿವುಗಳ ಹೋಲಿಕೆ  

ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.


ತಮ್ಮ ಇಸ್ರಯೇಲ್ ಪ್ರಜೆಗೆ ಸಮನಾದ ಜನಾಂಗ ಲೋಕದಲ್ಲಿ ಬೇರೆ ಯಾವುದಿದೆ? ದೇವರಾದ ತಾವೇ ಬಂದು ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿಸಿಕೊಂಡಿರಿ; ಆಶ್ಚರ್ಯಕರವಾದ ಅದ್ಭುತಕಾರ್ಯಗಳಿಂದ ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರ ಕೈಯಿಂದ ತಮ್ಮ ಪ್ರಜೆಯನ್ನು ತಪ್ಪಿಸಿ, ರಕ್ಷಿಸಿದಿರಿ. ಅನ್ಯಜನಾಂಗಗಳನ್ನು ಅವರ ನಾಡಿನಿಂದ ಹೊರಡಿಸಿಬಿಟ್ಟಿರಿ.


ಸರ್ವೇಶ್ವರಾ, ನೀವು ಅವರಿಗೆ ದೇವರಾದಿರಿ. ಸರ್ವೇಶ್ವರಾ, ತಮ್ಮ ದಾಸನನ್ನೂ ಅವನ ಕುಟುಂಬವನ್ನೂ ಕುರಿತು ನೀವು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ, ನೆರವೇರಿಸಿರಿ. ಅದು ಸದಾ ಸ್ಥಿರವಾಗಿರಲಿ.


ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ; ಸರ್ವೇಶ್ವರಾ, ತಾವಾದಿರಿ ಅವರಿಗೆ ದೇವರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು