Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:23 - ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರಾ, ನೀವು ಅವರಿಗೆ ದೇವರಾದಿರಿ. ಸರ್ವೇಶ್ವರಾ, ತಮ್ಮ ದಾಸನನ್ನೂ ಅವನ ಕುಟುಂಬವನ್ನೂ ಕುರಿತು ನೀವು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ, ನೆರವೇರಿಸಿರಿ. ಅದು ಸದಾ ಸ್ಥಿರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ಶಾಶ್ವತ ಪಡಿಸಿ ನೆರವೇರಿಸು; ಅದು ಸದಾ ಸ್ಥಿರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಯೆಹೋವನೇ, ಈಗ ನೀನು ನನಗೂ ನನ್ನ ಸಂತತಿಗೂ ಈ ವಾಗ್ದಾನವನ್ನು ಮಾಡಿರುವೆ. ಆ ವಾಗ್ದಾನವನ್ನು ಶಾಶ್ವತಗೊಳಿಸು; ಅದು ಸದಾಕಾಲಕ್ಕೂ ಸ್ಥಿರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಈಗ ಯೆಹೋವ ದೇವರೇ, ನೀವು ನಿಮ್ಮ ಸೇವಕನನ್ನು ಕುರಿತೂ, ಅವನ ಕುಟುಂಬವನ್ನು ಕುರಿತೂ ಮಾಡಿದ ವಾಗ್ದಾನವನ್ನು ನೆರವೇರಿಸಿ ಅದನ್ನು ಶಾಶ್ವತವಾಗಿ ಸ್ಥಿರಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:23
10 ತಿಳಿವುಗಳ ಹೋಲಿಕೆ  

ಆಗ ಮರಿಯಳು "ಇಗೋ, ನಾನು ದೇವರ ದಾಸಿ. ನೀವು ಹೇಳಿದಂತೆ ನನಗಾಗಲಿ,” ಎಂದಳು. ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.


ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.


ಸ್ಮರಿಸಿಕೋ ದಾಸನೆನಗೆ ನೀನಿತ್ತಾ ಮಾತನು I ಹುಟ್ಟಿಸಿರುವೆ ನನ್ನೊಳು ನಂಬಿಕೆ, ನಿರೀಕ್ಷೆಗಳನು II


ನಿನಗೆ ಒಳ್ಳೆಯದನ್ನೇ ಮಾಡಿ ನಿನ್ನ ಸಂತತಿಯನ್ನು ಎಣಿಸಲಾಗದ ಕಡಲತೀರದ ಮರಳಿನಂತೆ ಹೆಚ್ಚಿಸುವೆನು, ಎಂದು ಹೇಳಿದವರು ನೀವೇ ಅಲ್ಲವೇ?”


ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ;


‘ಸರ್ವಶಕ್ತರಾದ ಸರ್ವೇಶ್ವರ, ಇಸ್ರಯೇಲರ ದೇವರು; ತಮ್ಮ ದಾಸ ದಾವೀದನ ಮನೆತನವನ್ನು ತಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿಟ್ಟಿದ್ದಾರೆ’ ಎಂದು ಜನರು ನಿಮ್ಮ ನಾಮವನ್ನು ಕೊಂಡಾಡಲಿ.


“ಇಸ್ರಯೇಲ್ ದೇವರಾದ ಸರ್ವೇಶ್ವರ ನನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಯೇಲರ ಅರಸನಾಗಿರುವುದಕ್ಕೆ ಆರಿಸಿಕೊಂಡರು; ಯೆಹೂದಕುಲ ರಾಜಕುಲವಾಗಬೇಕೆಂದು ನೇಮಿಸಿ ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡರು. ನನ್ನ ತಂದೆಯ ಎಲ್ಲ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ, ಇಸ್ರಯೇಲರೆಲ್ಲರ ಅರಸನನ್ನಾಗಿ ಮಾಡಿದರು.


ಇಸ್ರಯೇಲ್ ದೇವರೇ, ನೀವು ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ!


ಹೀಗೆ ಇರಲಾಗಿ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ ನುಡಿದದ್ದು ಸಾರ್ಥಕವಾಗಲಿ; ಧರೆಯ ಧೂಳಿನಷ್ಟು ಅಸಂಖ್ಯವಾದ ಜನಾಂಗದ ಮೇಲೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು