1 ಪೂರ್ವಕಾಲ ವೃತ್ತಾಂತ 17:24 - ಕನ್ನಡ ಸತ್ಯವೇದವು C.L. Bible (BSI)24 ‘ಸರ್ವಶಕ್ತರಾದ ಸರ್ವೇಶ್ವರ, ಇಸ್ರಯೇಲರ ದೇವರು; ತಮ್ಮ ದಾಸ ದಾವೀದನ ಮನೆತನವನ್ನು ತಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿಟ್ಟಿದ್ದಾರೆ’ ಎಂದು ಜನರು ನಿಮ್ಮ ನಾಮವನ್ನು ಕೊಂಡಾಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಜನರು ‘ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್ ದೇವರೂ, ಶರಣನೂ ಆಗಿದ್ದಾನೆ. ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ’ ಎಂದು ನಿನ್ನ ನಾಮವನ್ನು ಕೊಂಡಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 [ಜನರು -] ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್‍ದೇವರೂ ಇಸ್ರಾಯೇಲ್ಯರ ಶರಣನೂ ಆಗಿದ್ದಾನೆ, ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ ಎಂದು ನಿನ್ನ ನಾಮವನ್ನು ಕೊಂಡಾಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಿನ್ನ ವಾಗ್ದಾನವನ್ನು ನೆರವೇರಿಸು. ಆಗ ಜನರು, ‘ಸರ್ವಶಕ್ತನಾದ ಯೆಹೋವನು ಇಸ್ರೇಲರ ದೇವರೂ ರಕ್ಷಕನೂ ಆಗಿದ್ದಾನೆ’ ಎಂದು ಹೇಳುವರು. ನಾನು ನಿನ್ನ ಸೇವಕನಾಗಿದ್ದೇನೆ. ನನ್ನ ಕುಟುಂಬವು ಬಲಿಷ್ಠವಾಗಿದ್ದು ನಿನ್ನ ಸೇವೆಯನ್ನು ಮುಂದುವರಿಸುವಂತೆ ಕೃಪೆಯನ್ನು ಅನುಗ್ರಹಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲ್ ದೇವರಾಗಿದ್ದಾರೆಂದು ನಿಮ್ಮ ನಾಮವು ಶಾಶ್ವತವಾಗಿ ಘನಪಡಲಿ,’ ಎಂದು ಜನರು ಹೇಳಲಿ. ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರಲಿ. ಅಧ್ಯಾಯವನ್ನು ನೋಡಿ |