Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:5 - ಕನ್ನಡ ಸತ್ಯವೇದವು C.L. Bible (BSI)

5 “ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಇಸ್ರಾಯೇಲರನ್ನು ಐಗುಪ್ತದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಇಸ್ರಾಯೇಲ್ಯರನ್ನು [ಐಗುಪ್ತ ದೇಶದಿಂದ] ಬರ ಮಾಡಿದಂದಿನಿಂದ ಇಂದಿನವರೆಗೂ ಮನೆಯಲ್ಲಿ ವಾಸಮಾಡಲಿಲ್ಲ; ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5-6 ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿದಂದಿನಿಂದ ಈ ದಿವಸದ ತನಕ ನಾನು ಮನೆಯಲ್ಲಿ ವಾಸವಾಗಿರಲಿಲ್ಲ. ನಾನು ಗುಡಾರದಲ್ಲಿಯೇ ಇದ್ದುಕೊಂಡು ಸಂಚರಿಸುತ್ತಿದ್ದೆನು. ಇಸ್ರೇಲರ ನಾಯಕರಾಗುವದಕ್ಕೆ ನಾನು ಕೆಲವರನ್ನು ಆರಿಸಿಕೊಂಡಿದ್ದೇನೆ. ಆ ನಾಯಕರು ನನ್ನ ಜನರಿಗೆ ಕುರುಬರಂತಿದ್ದಾರೆ. ಅವರೊಂದಿಗೆ ನಾನು ಬೇರೆಬೇರೆ ಸ್ಥಳಗಳಿಗೆ ಸಂಚರಿಸುತ್ತಿದ್ದಾಗ ನಾನೆಂದೂ ನನಗೊಂದು ಆಲಯವನ್ನು ದೇವದಾರು ಮರದಿಂದ ಕಟ್ಟಲು ಕೇಳಿಕೊಂಡಿರಲಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು, ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಒಂದು ಗುಡಾರದ ಸ್ಥಳದಿಂದ ಇನ್ನೊಂದು ಗುಡಾರದ ಸ್ಥಳಕ್ಕೂ, ಒಂದು ತಂಗುವ ಸ್ಥಳದಿಂದ ಇನ್ನೊಂದು ತಂಗುವ ಸ್ಥಳಕ್ಕೂ ಹೋಗುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:5
12 ತಿಳಿವುಗಳ ಹೋಲಿಕೆ  

ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆ.


‘ನಾನು ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಆಲಯ ಸ್ಥಾನವನ್ನಾಗಲಿ, ಇಸ್ರಯೇಲ್ ಕುಲಗಳ ಯಾವ ಪಟ್ಟಣವನ್ನಾಗಲಿ ಆರಿಸಿಕೊಳ್ಳಲಿಲ್ಲ. ಆದರೆ ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನು ಆರಿಸಿಕೊಂಡೆ’ ಎಂದು ಹೇಳಿದ್ದರು.


“ದೇವರು ನಿಜವಾಗಿ ಮಾನವರೊಡನೆ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿಮ್ಮ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಅವರಿಗೆ ಆಲಯವನ್ನು ಕಟ್ಟುವುದಕ್ಕೆ ಯಾರೂ ಶಕ್ತರಲ್ಲ; ಆಕಾಶವೂ ಉನ್ನತೋನ್ನತವಾದ ಆಕಾಶವೂ ಅವರ ವಾಸಕ್ಕೆ ಸಾಲದಿರುವಲ್ಲಿ ಅವರಿಗಾಗಿ ಆಲಯವನ್ನು ಕಟ್ಟುವುದಕ್ಕೆ ಯಾರು ತಾನೆ ಶಕ್ತರು? ನಾನು ಅವರ ಸನ್ನಿಧಿಯಲ್ಲಿ ಧೂಪಾರತಿ ಎತ್ತುವ ಒಂದು ಸ್ಥಳವನ್ನು ಕಟ್ಟಿಸಬಲ್ಲೆನೇ ಹೊರತು, ಅವರ ವಾಸಕ್ಕಾಗಿ ಆಲಯವನ್ನು ಕಟ್ಟಿಸುವುದಕ್ಕೆ ನಾನು ಎಷ್ಟು ಮಾತ್ರಕ್ಕೂ ಶಕ್ತನಲ್ಲ.


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಉಳಿದ ಯಾಜಕರೂ ಲೇವಿಯರೂ ದೇವದರ್ಶನದ ಗುಡಾರ ಹಾಗು ಅದರಲ್ಲಿದ್ದ ಪವಿತ್ರವಸ್ತುಗಳನ್ನು ಹೊತ್ತರು.


ಜನರು ಸರ್ವೇಶ್ವರನ ಮಂಜೂಷವನ್ನು ತಂದು ದಾವೀದನು ಕಟ್ಟಿಸಿದ್ದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿ ಇಟ್ಟರು; ಆಗ ದಾವೀದನು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದನು.


ಅವರು, ‘ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಇಸ್ರಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ಆಲಯಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.


ಆದರೆ ಈಗ ನನ್ನ ನಾಮಸ್ಥಾಪನೆಗಾಗಿ ಜೆರುಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನೂ ಆರಿಸಿಕೊಂಡಿದ್ದೇನೆ’, ಎಂದು ಹೇಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು