1 ಪೂರ್ವಕಾಲ ವೃತ್ತಾಂತ 17:7 - ಕನ್ನಡ ಸತ್ಯವೇದವು C.L. Bible (BSI)7 “ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೇಳಿದೆನೆಂದು ಹೀಗೆ ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ಕರೆದುಕೊಂಡು ಬಂದು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ನನ್ನ ಸೇವಕನಾದ ದಾವೀದನಿಗೆ ಹೇಳು: ಸರ್ವಶಕ್ತನಾದ ದೇವರು ಹೀಗೆನ್ನುತ್ತಾನೆ: ‘ಕುರಿಗಳನ್ನು ಮೇಯಿಸುತ್ತಿದ್ದ ನಿನ್ನನ್ನು ನಾನು ಆರಿಸಿಕೊಂಡೆನು; ನನ್ನ ಜನರಾದ ಇಸ್ರೇಲರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು. ಅಧ್ಯಾಯವನ್ನು ನೋಡಿ |
ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಿದ್ದೆನು. ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗಲೆಲ್ಲಾ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ’.”