Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:12 - ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ ಚೆರೂಯಳ ಮಗ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಸೈನಿಕರನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಒಮ್ಮೆ ಹದಿನೆಂಟು ಸಾವಿರ ಮಂದಿ ಎದೋಮ್ಯರನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಚೆರೂಯಳ ಮಗ ಅಬೀಷೈಯನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಎದೋಮ್ಯರ ಸೈನಿಕರನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:12
23 ತಿಳಿವುಗಳ ಹೋಲಿಕೆ  

ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II


ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ಕಣಿವೆಗೆ ಹೋಗಿ, ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ವಧಿಸಿದನು.


ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು,


ಯೋವಾಬನ ಸಹೋದರ ಅಬ್ಷೈ ‘ಮೂವತ್ತು ಪ್ರಮುಖ ವೀರರು,’ ಎಂಬ ಪಡೆಯ ನಾಯಕನಾಗಿದ್ದನು . ಅವನು ತನ್ನ ಈಟಿಯಿಂದ ಮುನ್ನೂರು ಜನರಿಗೆ ವಿರೋಧವಾಗಿ ಹೋರಾಡಿ ಅವರನ್ನು ಕೊಂದುಹಾಕಿ ‘ಮೂವತ್ತು ಪ್ರಮುಖ ವೀರರು ‘ ಎಂಬ ಪಡೆಯಲ್ಲಿ ಪ್ರಖ್ಯಾತ ನಾದನು .


ಅವನ ಇಬ್ಬರು ಹೆಣ್ಣು ಮಕ್ಕಳು: ಚೆರೂಯ ಹಾಗೂ ಅಬೀಗೈಲ ಎಂಬವರು. ಜೆಸ್ಸೆಯ ಮಗಳು ಚೆರೂಯಳಿಗೆ ಅಬೈ , ಯೋವಾಬ್ , ಅಸಾಹೇಲ್ ಎಂಬ ಮೂರು ಜನ ಮಕ್ಕಳಿದ್ದರು .


ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು,


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಹಾಗು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನು ಉದ್ದೇಶಿಸಿ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದನು. ಅದಕ್ಕೆ ಅಬೀಷೈಯು, “ನಾನು ಬರುತ್ತೇನೆ,” ಎಂದು ಉತ್ತರಕೊಟ್ಟನು.


ಇದಲ್ಲದೆ, ಉಪ್ಪಿನ ಕಣಿವೆಯಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು ಅವರಿಂದ ‘ಸೆಲ’ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಭರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದುದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.


ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು.


ಆದ್ದರಿಂದ ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿ ಬಂಧಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಳ್ಳಬಹುದು,” ಎಂದನು.


ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು ಜೆರುಸಲೇಮಿಗೆ ಹೋದನು.


ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ವಧಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.


ಅಬೀಷೈಯು ದಾವೀದನಿಗೆ, “ದೇವರು ಈ ದಿನ ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾರೆ; ಅಪ್ಪಣೆಯಾಗಲಿ, ನಾನು ಭರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಕಚ್ಚಿಕೊಳ್ಳುವಂತೆ ತಿವಿಯುತ್ತೇನೆ. ಎರಡನೆಯ ಸಾರಿ ಹೊಡೆಯುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿದನು.


ದಾವೀದನಿಗೂ ಎದೋಮ್ಯರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ ಹತರಾದ ಇಸ್ರಯೇಲರನ್ನು ಸಮಾಧಿಮಾಡಿದನು.


ಅರಸ ದಾವೀದನು ಕಾಣಿಕೆಗಳನ್ನು ಮಾತ್ರವಲ್ಲದೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.


ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದ್ದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.


ನಾಡನು ನಡುಗಿಸಿ ಬಿಡಿಬಿಡಿಯಾಗಿಸಿದೆ I ಅದರೊಡಕನು ಸರಿಮಾಡು ತಡವರಿಸದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು