Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:13 - ಕನ್ನಡ ಸತ್ಯವೇದವು C.L. Bible (BSI)

13 ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದ್ದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದಾವೀದನು ಎದೋವಿುನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಬ್ಷೈಯು ಎದೋಮಿನಲ್ಲಿ ಕೋಟೆಯನ್ನು ಕಟ್ಟಿ ಎದೋಮ್ಯರೆಲ್ಲರನ್ನು ದಾವೀದನ ಸೇವಕರನ್ನಾಗಿ ಮಾಡಿದನು. ದಾವೀದನು ಹೋದಕಡೆಗಳಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:13
19 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ದಮಸ್ಕದ ಸಿರಿಯಾ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕುತ್ತಿತ್ತು.


ಆಗ ಇಸಾಕನು, “ಅವನನ್ನು ನಿನಗೆ ಒಡೆಯನನ್ನಾಗಿ ನೇಮಿಸಿದ್ದೇನೆ; ಸಹೋದರರನ್ನೇ ಅವನಿಗೆ ಕೆಲಸಗಾರರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನಿಗೆ ಬಿಟ್ಟಿದ್ದೇನೆ. ಹೀಗಿರಲು ಮಗನೇ, ನಾನು ನಿನಗೇನು ತಾನೆ ಮಾಡಲು ಸಾಧ್ಯ?” ಎಂದನು.


ನಾನು ದಮಸ್ಕಸಿನಲ್ಲಿದ್ದಾಗ ರಾಜ ಅರೇತನ ಕೈಕೆಳಗಿದ್ದ ರಾಜ್ಯಪಾಲನು ನನ್ನನ್ನು ಸೆರೆಹಿಡಿಯುವ ಸಲುವಾಗಿ ಪಟ್ಟಣದ ದ್ವಾರಗಳಿಗೆ ಕಾವಲಿರಿಸಿದ್ದನು.


ನೀನೇ ಅರಸುಗಳಿಗೆ ಜಯಪ್ರದನು I ದಾಸ ದಾವೀದನನು ಬಿಡಿಸಿದವನು II


ಪ್ರಭು ಕಾಯುವನು ನಿನ್ನ ಪ್ರಾಣವನು I ಸಕಲ ಕೇಡಿನಿಂದ ಕಾಪಾಡುವನು II


ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.


ಒಂದು ದಿನ ಸೌಲನ ಮಗ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ಆಚೆ ಇರುವ ಫಿಲಿಷ್ಟಿಯರ ಕಾವಲು ದಂಡಿಗೆ ವಿರೋಧವಾಗಿ ಹೋಗೋಣ ಬಾ,” ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.


ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದನು. ಈ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಹಿಬ್ರಿಯರೆಲ್ಲರಿಗೂ ಇದು ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು.


ಅಲ್ಲಿಂದ ದೇವಗಿರಿಯನ್ನು ಮುಟ್ಟಿದಾಗ ಫಿಲಿಷ್ಟಿಯರ ದಂಡುಪ್ರದೇಶವನ್ನು ಕಾಣುವೆ; ಮುಂಗಡೆಯಲ್ಲಿ ಸ್ವರಮಂಡಲ, ತಮ್ಮಟೆ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಗಳ ಒಂದು ಗುಂಪನ್ನು ಕಾಣುವೆ. ಅವರು ಪರವಶರಾಗಿ ಪ್ರವಾದಿಸುವರು.


ಸ್ವಾಧೀನವಾಗಿಸಿಕೊಂಡಿದ್ದಾನೆ ಎದೋಮ್ಯರ ನಾಡನ್ನು; ಆತನಿಗೆ ಅಧೀನರಾದರು ಹಗೆಗಳಾದ ಸೇಯೀರಿನವರು.


ಬಾಳ ನಡೆಸುವೆ ಕತ್ತಿಕಠಾರಿಯಿಂದಲೇ ಕೂಲಿಯಾಳಾಗುವೆ ಸೋದರನಿಗೆ ಮುರಿಯುವೆ ಅವ ಹೊರಿಸಿದ ನೊಗವ ಸ್ವಾತಂತ್ರ್ಯಕ್ಕಾಗಿ ನೀ ಬಂಡಾಯ ಹೂಡಿದಾಗ,”


ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ.


ದಾವೀದನಿಗೂ ಎದೋಮ್ಯರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ ಹತರಾದ ಇಸ್ರಯೇಲರನ್ನು ಸಮಾಧಿಮಾಡಿದನು.


ಇದಲ್ಲದೆ ಚೆರೂಯಳ ಮಗ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದನು.


ದಾವೀದನು ಇಸ್ರಯೇಲರ ಅರಸನಾಗಿ ಪ್ರಜೆಗಳೆಲ್ಲರನ್ನು ಧರ್ಮಾನುಸಾರ, ನ್ಯಾಯಯುತವಾಗಿ ನಡೆಸುತ್ತಿದ್ದನು.


ಸರ್ವೇಶ್ವರ ಅವನೊಂದಿಗೆ ಇದ್ದುದರಿಂದ ಅವನು ಎಲ್ಲ ಕಾರ್ಯಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು