Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:3 - ಕನ್ನಡ ಸತ್ಯವೇದವು C.L. Bible (BSI)

3 ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜೆರನನ್ನು ದಾವೀದನು ಹಮಾತಿನ ಬಳಿಯಲ್ಲಿ ಪರಾಭವಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದಾವೀದನು ಯೂಫ್ರೇಟೀಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯದೊಡನೆ ಕಾದಾಡಿ ಅವರನ್ನು ಹಮಾತಿನ ತನಕ ಹಿಂದಟ್ಟಿದನು. ಹದದೆಜರನು ತನ್ನ ರಾಜ್ಯವನ್ನು ಯೂಫ್ರೇಟೀಸ್ ನದಿಯ ತನಕ ವಿಸ್ತರಿಸಲು ಪ್ರಯತ್ನಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದದೆಜೆರನನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:3
11 ತಿಳಿವುಗಳ ಹೋಲಿಕೆ  

ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II


ಬಳಿಕ ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ದಾವೀದನು ಪರಾಭವಗೊಳಿಸಿದನು.


ತಾವು ದಾವೀದನಿಗೆ ವೈರಿಗಳಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಹಣಕೊಟ್ಟು ಬೇತ್ ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಸಿರಿಯಾದವರ ಇಪ್ಪತ್ತು ಸಾವಿರಮಂದಿ ಕಾಲಾಳುಗಳನ್ನು, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನು ಹಾಗು ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ಬರಮಾಡಿದರು.


ಸೌಲನು ಇಸ್ರಯೇಲರ ಅರಸನಾದ ಮೇಲೆ ಅವನು ಸುತ್ತಲಿನ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಕೆಂಪು ಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಿರುವ ಸಮುದ್ರದವರೆಗೂ ಮತ್ತು ಈ ಮರುಭೂಮಿಯಿಂದ ಯೂಫ್ರೆಟೀಸ್ ಮಹಾ ನದಿಯವರೆಗೂ ಇರುವ ನಾಡನ್ನೆಲ್ಲಾ ನಿಮಗೆ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದನು; ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.


ದಂಗೆಯೆಬ್ಬಿಸುತ್ತಾ ಬಂದಿದ್ದಾರೆ; ಇದಲ್ಲದೆ ಜೆರುಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ನದಿಯಾಚೆಯ ಎಲ್ಲ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.


ಅನಂತರ ಅವನು ಚೋಬರಾಜ್ಯದ ಹಮಾತಿಗೆ ಹೋಗಿ ಅದನ್ನು ಸ್ವಾಧೀನ ಮಾಡಿಕೊಂಡನು.


ನಾಡನು ನಡುಗಿಸಿ ಬಿಡಿಬಿಡಿಯಾಗಿಸಿದೆ I ಅದರೊಡಕನು ಸರಿಮಾಡು ತಡವರಿಸದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು