1 ಪೂರ್ವಕಾಲ ವೃತ್ತಾಂತ 18:4 - ಕನ್ನಡ ಸತ್ಯವೇದವು C.L. Bible (BSI)4 ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದನು; ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದಾವೀದನು ಅವನ ಸಾವಿರ ರಥಗಳನ್ನೂ, ಏಳುಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು, ಉಳಿದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನ ಸಾವಿರ ರಥಗಳನ್ನೂ ಏಳುಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ವಿುಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಹದದೆಜರನಿಂದ ದಾವೀದನು ಒಂದು ಸಾವಿರ ರಥಗಳನ್ನೂ ಏಳು ಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ಹದದೆಜರನ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ಆ ಕುದುರೆಗಳು ರಥಗಳನ್ನು ಎಳೆಯದಂತೆ ಮಾಡಿದನು. ಆದರೆ ನೂರು ರಥಗಳನ್ನು ಎಳೆಯಲು ಬೇಕಾಗುವಷ್ಟು ಕುದುರೆಗಳನ್ನು ಉಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು. ಅಧ್ಯಾಯವನ್ನು ನೋಡಿ |