1 ಪೂರ್ವಕಾಲ ವೃತ್ತಾಂತ 19:3 - ಕನ್ನಡ ಸತ್ಯವೇದವು C.L. Bible (BSI)3 ಅಲ್ಲಿನ ನಾಯಕರು ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆ ಎಂದು ತಿಳಿಯುತ್ತೀರೋ? ಇಲ್ಲ, ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದು ಬಂದಿದ್ದಾರೆ,” ಎಂದು ದೂರಿತ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಅಮ್ಮೋನ್ ಪ್ರಭುಗಳು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ, ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಲ್ಲಿನ ಪ್ರಭುಗಳು ಹಾನೂನನಿಗೆ - ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಅಮ್ಮೋನಿಯರ ನಾಯಕರು ಹಾನೂನನಿಗೆ, “ಮೋಸ ಹೋಗಬೇಡ, ದಾವೀದನು ನಿನ್ನ ತಂದೆಯನ್ನು ಗೌರವಿಸಿ ನಿನ್ನನ್ನು ಸಂತೈಸಲು ಸೇವಕರನ್ನು ಕಳುಹಿಸಿದನೆಂದು ಭಾವಿಸಿಕೊಂಡಿರುವೆಯಾ? ಇಲ್ಲ, ಅವನು ನಿನ್ನ ರಾಜ್ಯದಲ್ಲಿ ಹೊಂಚುಹಾಕಲೂ ವಿಷಯಗಳನ್ನು ಸಂಗ್ರಹಿಸಲೂ ಕಳುಹಿಸಿದ್ದಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಅಮ್ಮೋನಿಯರ ಪ್ರಧಾನರು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ಅವನ ದೂತರು ಈ ದೇಶವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಬರಲಿಲ್ಲವೋ?” ಎಂದರು. ಅಧ್ಯಾಯವನ್ನು ನೋಡಿ |