Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:4 - ಕನ್ನಡ ಸತ್ಯವೇದವು C.L. Bible (BSI)

4 ಆದುದರಿಂದ ಹಾನೂನನು ದಾವೀದನ ಸೈನಿಕರನ್ನು ಬಂಧಿಸಿದನು. ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ [ಗಡ್ಡದ ಅರ್ಧಭಾಗವನ್ನು] ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಹಾನೂನನು ದಾವೀದನ ಸೇವಕರನ್ನು ಬಂಧಿಸಿ ಅವರ ಗಡ್ಡಗಳನ್ನು ಬೋಳಿಸಿ ಅವರ ವಸ್ತ್ರಗಳನ್ನು ಸೊಂಟದಿಂದ ಕೆಳಭಾಗದವರೆಗೆ ಕತ್ತರಿಸಿಬಿಟ್ಟು ಅವರನ್ನು ಹಿಂದಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಹಾನೂನನು ದಾವೀದನ ದೂತರನ್ನು ಹಿಡಿದು ಅವರ ಗಡ್ಡ, ತಲೆ ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:4
14 ತಿಳಿವುಗಳ ಹೋಲಿಕೆ  

ತೋಟದ ಯಜಮಾನ ಪುನಃ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಅವರು ಅವನ ತಲೆಯ ಮೇಲೆ ಹೊಡೆದು, ಅವಮಾನ ಮಾಡಿ ಕಳುಹಿಸಿದರು.


ಎಲ್ಲರ ತಲೆಬೋಳು, ಎಲ್ಲರ ಗಡ್ಡ ವಿಕಾರ, ಎಲ್ಲರ ಕೈ ಗಾಯ. ಎಲ್ಲರ ನಡುವಿಗೆ ಗೋಣಿತಟ್ಟು.


ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.


ಅದೇ ಪ್ರಕಾರ ಅಸ್ಸೀರಿಯದ ಅರಸನು ಈಜಿಪ್ಟಿನ ಸೆರೆಯಾಳುಗಳನ್ನೂ ಸುಡಾನಿನ ಕೈದಿಗಳನ್ನೂ - ದೊಡ್ಡವರು ಚಿಕ್ಕವರು ಎನ್ನದೆ ಎಲ್ಲರನ್ನೂ ಬಟ್ಟೆಯಿಲ್ಲದೆ ಬೆತ್ತಲೆಯಾಗಿಸಿ, ಬರಿಗಾಲಿನಲ್ಲೇ ಸೆರೆಮನೆಗೆ ನಡೆಯುವಂತೆ ಮಾಡುವನು. ಹೀಗೆ ಈಜಿಪ್ಟಿನ ನಿವಾಸಿಗಳನ್ನು ಮಾನಭಂಗಕ್ಕೆ ಗುರಿಪಡಿಸುವನು.


ಹತ್ತಿಹರು ಗುಡಿಗೋಪುರಗಳನು ಆಳುವುದಕ್ಕಾಗಿ, ದೀಬೋನಿನವರು, ಗೋಳಾಡುತಿಹರು ನೆಬೋವಿನಲಿ ಮೇಣ್ ಮೇದೆಬದಲಿ, ಮೋವಾಬ್ಯರು ತಲೆ ಬೋಳಿಸಿಹರು, ಗಡ್ಡ ಕತ್ತರಿಸಿಹರು ದುಃಖದಿಂದ ಎಲ್ಲರು.


ಎಸಗುತಿಹರು ಉಪಕಾರಕೆ ಅಪಕಾರ I ಮಾಡಿಹರೆನ್ನನು ನಿರ್ಗತಿಕ ಪಿಂಜಾರ II


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಚಂಡಿಕೆ ಬಿಡಬೇಡ, ಗಡ್ಡವನ್ನು ವಿಕಾರಗೊಳಿಸಬೇಡ.


ಅಲ್ಲಿನ ನಾಯಕರು ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆ ಎಂದು ತಿಳಿಯುತ್ತೀರೋ? ಇಲ್ಲ, ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದು ಬಂದಿದ್ದಾರೆ,” ಎಂದು ದೂರಿತ್ತರು.


ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದರು. ಬಹಳವಾಗಿ ಅಪಮಾನಹೊಂದಿದ ಅವರಿಗೆ ಆಗ ದಾವೀದನು ಆಳುಗಳ ಮುಖಾಂತರ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಜೆರಿಕೋವಿನಲ್ಲಿದ್ದು ಅನಂತರ ಬನ್ನಿ,” ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು