Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:5 - ಕನ್ನಡ ಸತ್ಯವೇದವು C.L. Bible (BSI)

5 ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದರು. ಬಹಳವಾಗಿ ಅಪಮಾನಹೊಂದಿದ ಅವರಿಗೆ ಆಗ ದಾವೀದನು ಆಳುಗಳ ಮುಖಾಂತರ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಜೆರಿಕೋವಿನಲ್ಲಿದ್ದು ಅನಂತರ ಬನ್ನಿ,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದಾಗ ಅವನು ಬಹಳ ಅವಮಾನಹೊಂದಿ ಅವರಿಗೆ ಆಳುಗಳ ಮುಖಾಂತರವಾಗಿ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದಾಗ ಅವನು ಬಹಳ ಅಪಮಾನ ಹೊಂದಿದ ಅವರಿಗೆ ಆಳುಗಳ ಮುಖಾಂತರವಾಗಿ - ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದಾವೀದನ ಸೇವಕರು ತಮ್ಮ ಮನೆಗೆ ಹಿಂದಿರುಗಲು ನಾಚಿಕೆಪಟ್ಟರು. ಇದನ್ನು ಅರಿತ ಕೆಲವರು ದಾವೀದನ ಬಳಿಗೆ ಹೋಗಿ ನಡೆದದ್ದನ್ನು ತಿಳಿಸಿದರು. ಆಗ ದಾವೀದನು, “ನೀವು ನಿಮ್ಮ ಗಡ್ಡ ಬೆಳೆಯುವ ತನಕ ಜೆರಿಕೊ ಪಟ್ಟಣದಲ್ಲಿಯೇ ಇರಿ. ಅನಂತರ ನೀವು ಮನೆಗೆ ಬರಬಹುದು” ಎಂದು ತನ್ನ ಸೇವಕರಿಗೆ ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಕೆಲವರು ಹೋಗಿ, ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:5
7 ತಿಳಿವುಗಳ ಹೋಲಿಕೆ  

ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು.


ಇವನ ಕಾಲದಲ್ಲೆ ಬೇತೇಲಿನವನಾದ ಹೀಯೇಲನು ಜೆರಿಕೋಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರಿಯ ಮಗನಾದ ಅಬೀರಾಮನನ್ನು ಹಾಗು ಅದಕ್ಕೆ ಬಾಗಿಲುಗಳನ್ನಿಡುವಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಸರ್ವೇಶ್ವರ ನೂನನ ಮಗ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.


ಅಷ್ಟರಲ್ಲಿ ಅವನ ತಲೆಗೂದಲುಗಳು ಬೆಳೆಯತೊಡಗಿದವು.


ಆದುದರಿಂದ ಹಾನೂನನು ದಾವೀದನ ಸೈನಿಕರನ್ನು ಬಂಧಿಸಿದನು. ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.


ತಾವು ದಾವೀದನಿಗೆ ವೈರಿಗಳಾದೆವು ಎಂದು ಹಾನೂನನಿಗೂ ಅಮ್ಮೋನಿಯರಿಗೂ ತಿಳಿಯಿತು. ಆದುದರಿಂದ ಅವರು ಎರಡು ನದಿಗಳ ಮಧ್ಯದಲ್ಲಿರುವ ಸಿರಿಯಾ ಸೀಮೆಯಿಂದಲೂ ಸಿರಿಯಾದ ಮಾಕದಿಂದಲೂ ಚೊಬಾ ರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವುದಕ್ಕಾಗಿ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.


ಆವರು ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದರು. ಬಹಳವಾಗಿ ಅಪಮಾನ ಹೊಂದಿದ ಅವರಿಗೆ ದಾವೀದನು ಆಳುಗಳ ಮುಖಾಂತರ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಜೆರಿಕೋವಿನಲ್ಲಿದ್ದು ಅನಂತರ ಬನ್ನಿ,” ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು