Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:6 - ಕನ್ನಡ ಸತ್ಯವೇದವು C.L. Bible (BSI)

6 ತಾವು ದಾವೀದನಿಗೆ ವೈರಿಗಳಾದೆವು ಎಂದು ಹಾನೂನನಿಗೂ ಅಮ್ಮೋನಿಯರಿಗೂ ತಿಳಿಯಿತು. ಆದುದರಿಂದ ಅವರು ಎರಡು ನದಿಗಳ ಮಧ್ಯದಲ್ಲಿರುವ ಸಿರಿಯಾ ಸೀಮೆಯಿಂದಲೂ ಸಿರಿಯಾದ ಮಾಕದಿಂದಲೂ ಚೊಬಾ ರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವುದಕ್ಕಾಗಿ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಮತ್ತು ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ, ಮಾಕದಿಂದಲೂ, ಚೋಬಾ ರಾಜ್ಯದಿಂದಲೂ ರಥಗಳನ್ನೂ, ರಾಹುತರನ್ನು ತರಿಸುವುದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನೂ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ ಅರಾಮ್ ಮಾಕದಿಂದಲೂ ಚೋಬಾರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನು ತಮಗೆ ಶತ್ರುವಾದನೆಂದು ಅಮ್ಮೋನಿಯರಿಗೆ ತಿಳಿದಾಗ ಹಾನೂನನು ಮೂವತ್ನಾಲ್ಕು ಸಾವಿರ ಕಿಲೋಗ್ರಾಂ ತೂಕದ ಬೆಳ್ಳಿಯನ್ನು ಕೊಟ್ಟು ಮೆಸೊಪೊಟೆಮಿಯಾದಿಂದ ರಥಗಳನ್ನೂ ರಾಹುತರನ್ನೂ ಕೊಂಡುಕೊಂಡನು. ಅಲ್ಲದೆ ಅರಾಮದ ಮಾಕ ಮತ್ತು ಚೋಬಾ ಪಟ್ಟಣಗಳಿಂದ ರಥಗಳನ್ನು ಮತ್ತು ರಾಹುತರನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನಿಗೆ ಮತ್ತು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅರಾಮಿನಲ್ಲಿಯೂ, ಅರಾಮ್ ಮಾಕದಲ್ಲಿಯೂ, ಚೋಬದಲ್ಲಿಯೂ ರಥಗಳನ್ನೂ, ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:6
21 ತಿಳಿವುಗಳ ಹೋಲಿಕೆ  

ದಾವೀದನು ಚೋಬನ ಅರಸನಾದ ಹದರೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು;


ತಾವು ದಾವೀದನಿಗೆ ವೈರಿಗಳಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಹಣಕೊಟ್ಟು ಬೇತ್ ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಸಿರಿಯಾದವರ ಇಪ್ಪತ್ತು ಸಾವಿರಮಂದಿ ಕಾಲಾಳುಗಳನ್ನು, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನು ಹಾಗು ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ಬರಮಾಡಿದರು.


ಆಗ ಯಕೋಬನು, ಸಿಮೆಯೋನ್ ಮತ್ತು ಲೇವಿಯರಿಗೆ, “ನೀವು ನನ್ನ ಹೆಸರನ್ನು ಈ ನಾಡಿನ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯಮಾಡಿಬಿಟ್ಟರಿ; ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಕೆಲವರೇ. ಈ ನಾಡಿನವರೆಲ್ಲರು ಒಟ್ಟಿಗೆ ಬಂದು ನನ್ನ ಮೇಲೆ ಬಿದ್ದರೆ ನಾನು ಮಾತ್ರವಲ್ಲ, ನನ್ನ ಮನೆಯವರೆಲ್ಲರೂ ನಿರ್ಮೂಲವಾಗುತ್ತೇವೆ ಅಲ್ಲವೇ?” ಎಂದನು.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II


ದಾರಿತಪ್ಪಿಹೋದ ದ್ರೋಹಿಗಳು ಅವರೆಲ್ಲ I ಒಳಿತನ್ನು ಮಾಡುವವನಿಲ್ಲ; ಓರ್ವನೂ ಇಲ್ಲ II


ಅಮ್ಮೋನಿಯರ ಅರಸನೊಡನೆ ಯುದ್ಧಮಾಡಿ ಅವರ ಮೇಲೆ ಜಯಗಳಿಸಿದನು; ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ 3,400 ಕಿಲೋಗ್ರಾಂ ಬೆಳ್ಳಿ, 1000 ಮೆಟ್ರಿಕ್ ಟನ್ ಗೋದಿ, 100 ಮೆಟ್ರಿಕ್ ಟನ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು.


ಇದಲ್ಲದೆ 3400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟು ಇಸ್ರಯೇಲರಿಂದಲೂ ಲಕ್ಷಮಂದಿ ಯೋಧರನ್ನು ತರಿಸಿದನು.


ಇಸ್ರಯೇಲರ ಅರಸನೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರಿಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡರು; ಎಲ್ಲ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡತೊಡಗಿದರು.


ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?", ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವರು,” ಎಂದರು.


ಇಸ್ರಯೇಲರ ಅರಸ ಆಹಾಬನು ಯೆಹೂದ್ಯರ ಅರಸ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್‍ಗಿಲ್ಯಾದಿಗೆ ಬರುತ್ತೀಯಾ?” ಎಂದು ಕೇಳಿದನು. ಅವನು, “ನಾನೂ ನೀನೂ ನನ್ನ ಜನರೂ ನಿನ್ನ ಜನರೂ ಒಂದೆ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಖಂಡಿತ ಬರುತ್ತೇನೆ,” ಎಂದು ಉತ್ತರಕೊಟ್ಟನು.


ಬಳಿಕ ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ದಾವೀದನು ಪರಾಭವಗೊಳಿಸಿದನು.


“ದಾವೀದನ ಹೆಸರು ಸ್ವಜನರಾದ ಇಸ್ರಯೇಲರಲ್ಲೇ ತಿರಸ್ಕೃತವಾಗಿದೆ. ಆದುದರಿಂದ ಇವನು ಎಂದೆಂದಿಗೂ ತನ್ನ ಅಧೀನನಾಗಿಯೇ ಇರುವನು,” ಎಂದು ಆಕೀಷನು ನಂಬಿದ್ದನು.


ಸೌಲನು ಇಸ್ರಯೇಲರ ಅರಸನಾದ ಮೇಲೆ ಅವನು ಸುತ್ತಲಿನ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಸೌಲನು ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದ್ದರಿಂದ, ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಯೇಲರು ತಿಳಿದು, ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.


ಅವರಿಗೆ ಆ ಮೇಸ್ತ್ರಿಗಳು, “ನೀವು ಮಾಡಿದ ದುಷ್ಕೃತ್ಯವನ್ನು ವಿಚಾರಿಸಿ ಸರ್ವೇಶ್ವರ ನಿಮಗೆ ತಕ್ಕ ಶಿಕ್ಷೆಯನ್ನು ವಿಧಿಸಲಿ. ಏಕೆಂದರೆ ಫರೋಹನಿಗೂ ಅವನ ಸೇವಕರಿಗೂ ನಾವು ಅಸಹ್ಯರಾಗುವಂತೆ ಮಾಡಿಬಿಟ್ಟಿರಿ. ನಮ್ಮನ್ನು ಕೊಲ್ಲಲು ಅವರ ಕೈಗೆ ಕತ್ತಿಯನ್ನೇ ಕೊಟ್ಟಂತಾಗಿದೆ,” ಎಂದು ನಿಂದಿಸಿದರು.


ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದರು. ಬಹಳವಾಗಿ ಅಪಮಾನಹೊಂದಿದ ಅವರಿಗೆ ಆಗ ದಾವೀದನು ಆಳುಗಳ ಮುಖಾಂತರ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಜೆರಿಕೋವಿನಲ್ಲಿದ್ದು ಅನಂತರ ಬನ್ನಿ,” ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು