Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:9 - ಕನ್ನಡ ಸತ್ಯವೇದವು C.L. Bible (BSI)

9 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಮ್ಮೋನಿಯರು ತಮ್ಮ ಪಟ್ಟಣದಿಂದ ಹೊರಬಂದರು. ಅವರ ಸಹಾಯಕ್ಕಾಗಿ ಬಂದಿದ್ದ ಅರಸರು ಪ್ರತ್ಯೇಕವಾಗಿಯೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅಮ್ಮೋನಿಯರು ಹೊರಟು, ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:9
12 ತಿಳಿವುಗಳ ಹೋಲಿಕೆ  

ಬೆಟ್ಟಗಳ ತುತ್ತತುದಿಯಲ್ಲಿ ಹಾರಾಡುತ್ತವೆ; ರಥಗಳಂತೆ ಚೀತ್ಕಾರಮಾಡುತ್ತವೆ; ಕೂಳೆಸುಡುವ ಬೆಂಕಿಯಂತೆ ಚಟಪಟ ಮಾಡುತ್ತವೆ; ಸಮರಕ್ಕೆ ಸಿದ್ಧವಾದ ಶೂರರ ಸೈನ್ಯದಂತಿವೆ.


ಆ ಕ್ರೂರಿಗಳು, ಆ ನಿಷ್ಕರುಣಿಗಳು ಹಿಡಿದುಕೊಂಡಿರುವರು ಬಿಲ್ಲನ್ನೂ ಈಟಿಯನ್ನೂ. ಅವರ ಧ್ವನಿ ಮೊರೆಯುತ್ತದೆ ಸಮುದ್ರದಂತೆ ಕುದುರೆ ಸವಾರಿ ತೊಡಗಲಿದೆ. ಬಾಬಿಲೋನ್ ನಗರಿಯೇ, ಕೇಳು, ಆ ಸೈನ್ಯ ಶೂರವೀರರಿಂದ ಕೂಡಿದೆ. ಅದು ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ. ಸರ್ವೇಶ್ವರನಾದ ನನ್ನ ನುಡಿ ಇದು.


ಅವರು ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯನ್ನೂ ಊರಬಾಗಿಲ ಬಳಿ ಶತ್ರುಗಳನ್ನು ತಡೆಗಟ್ಟುವವರಿಗೆ ಶೌರ್ಯವನ್ನೂ ನೀಡುವರು.


ಆಸನು ಅವನನ್ನು ಎದುರುಗೊಳ್ಳಲು ಹೋದನು. ಮಾರೇಷದ ಬಳಿಯಲ್ಲಿದ್ದ ಚೆಫಾತಾ ಬಯಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.


ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು. ಯಾರೊಬ್ಬಾಮನು ಎಂಟು ಲಕ್ಷ ಶ್ರೇಷ್ಠಯೋಧರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.


ನೀವು ಆಯಾ ಸ್ಥಳಗಳಲ್ಲಿರುವ ರಾಜರನ್ನು ತೆಗೆದುಹಾಕಿ, ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸಿರಿ.


ಸಿರಿಯಾದವರ ಅರಸ ಬೆನ್ಹದದನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತು ಎರಡು ಮಂದಿ ರಾಜರೊಡನೆ ಹೊರಟು ಬಂದು, ಸಮಾರಿಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಅರಸನು, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ,” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿ, ಸಾವಿರ ಸಾವಿರ ಮಂದಿಯಾಗಿ ಹೊರಟರು.


ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರಬಾಗಿಲಿನ ಬಳಿಯಲ್ಲೆ ವ್ಯೂಹಕಟ್ಟಿದರು. ಚೋಬಾ ಮತ್ತು ರೆಹೋಬ್ ಎಂಬ ಸ್ಥಳಗಳ ಸಿರಿಯಾದವರೂ ಟೋಬ್, ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.


ಈ ಫಿಲಿಷ್ಟಿಯರೊಡನೆ ಯುದ್ಧಮಾಡಲು ಸೌಲನೂ ಇಸ್ರಯೇಲರೂ ತಮ್ಮ ಸೈನ್ಯವನ್ನು ಜಮಾಯಿಸಿಕೊಂಡು ಏಲಾ ಕಣಿವೆಯಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.


ಈ ಸುದ್ದಿ ದಾವೀದನಿಗೆ ಮುಟ್ಟಿತು. ಅವನು ಯೋವಾಬನನ್ನೂ ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.


ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಯೇಲರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಆರಿಸಿಕೊಂಡು ಅವರನ್ನು ಸಿರಿಯಾದವರಿಗೆ ಇದಿರಾಗಿ ನಿಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು