1 ಪೂರ್ವಕಾಲ ವೃತ್ತಾಂತ 2:3 - ಕನ್ನಡ ಸತ್ಯವೇದವು C.L. Bible (BSI)3 ಯೆಹೂದನ ಹೆಂಡತಿ ಶೂನನ ಮಗಳಾದ ಕಾನಾನಳು. ಅವಳಿಂದ ಏರ್, ಓನಾನ್, ಶೇಲಹ ಎಂಬ ಮೂರು ಮಕ್ಕಳು ಜನಿಸಿದರು. ಅವನ ಹಿರಿಯ ಮಗ ಏರನು ಬಹಳ ದುಷ್ಟ. ಆದುದರಿಂದ ಸರ್ವೇಶ್ವರ ಅವನನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೂದನಿಗೆ ಏರ್, ಓನಾನ್ ಮತ್ತು ಶೇಲಾಹ ಎಂಬ ಮೂರು ಮಕ್ಕಳು ಶೂನನ ಮಗಳಾದ ಕಾನಾನಳಿಂದ ಹುಟ್ಟಿದರು. ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ಚಿತ್ತಕ್ಕೆ ವಿರೋಧವಾಗಿ ನಡೆದುಕೊಂಡದ್ದರಿಂದ ಯೆಹೋವನು ಅವನನ್ನು ಕೊಂದು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೂದನಿಗೆ ಶೂನನ ಮಗಳಾದ ಕಾನಾನ್ ಸ್ತ್ರೀಯಲ್ಲಿ ಏರ್, ಓನಾನ್, ಶೇಲಾಹ ಎಂಬ ಮೂರು ಮಂದಿ ಮಕ್ಕಳು ಹುಟ್ಟಿದರು. ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದದರಿಂದ ಯೆಹೋವನು ಅವನನ್ನು ಸಾಯಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೂದನ ಗಂಡುಮಕ್ಕಳು ಯಾರೆಂದರೆ: ಏರ್, ಓನಾನ್ ಮತ್ತು ಶೆಲಾಹ. ಬತ್ಷೂವಳು ಇವರ ತಾಯಿ. ಈಕೆ ಕಾನಾನ್ಯಳು. ಯೆಹೂದನ ಚೊಚ್ಚಲ ಮಗ ಏರ್. ಯೆಹೋವನ ದೃಷ್ಟಿಯಲ್ಲಿ ಇವನು ಕೆಟ್ಟವನಾಗಿದ್ದ ಕಾರಣ ಕೊಲ್ಲಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೂದನ ಪುತ್ರರು: ಏರ್, ಓನಾನ್, ಶೇಲಹ. ಈ ಮೂವರು ಅವನಿಗೆ ಶೂನನ ಮಗಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಯೆಹೂದನ ಚೊಚ್ಚಲಮಗನಾದ ಏರನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟವನಾದ್ದರಿಂದ, ದೇವರು ಅವನನ್ನು ಮರಣಕ್ಕೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿ |