Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:4 - ಕನ್ನಡ ಸತ್ಯವೇದವು C.L. Bible (BSI)

4 ಯೆಹೂದನಿಗೆ ಅವನ ಸೊಸೆ ತಾಮಾರಳಿಂದ ಪೆರೆಜ್ ಹಾಗೂ ಜೆರಹ ಎಂಬ ಮಕ್ಕಳು ಜನಿಸಿದರು. ಯೆಹೂದನ ಮಕ್ಕಳು ಒಟ್ಟು ಐದು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಚ್ ಮತ್ತು ಜೆರಹ ಎಂಬವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಚ್, ಜೆರಹ ಎಂಬವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದನ ಸೊಸೆಯಾಗಿದ್ದ ತಾಮಾರಳು ಯೆಹೂದನಿಂದ ಪೆರೆಚ್ ಮತ್ತು ಜೆರಹ ಎಂಬ ಇಬ್ಬರು ಗಂಡುಮಕ್ಕಳನ್ನು ಹೆತ್ತಳು. ಹೀಗೆ ಯೆಹೂದನಿಗೆ ಐದು ಗಂಡುಮಕ್ಕಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೂದನ ಸೊಸೆ ತಾಮಾರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಪುತ್ರರೆಲ್ಲರೂ ಐದು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:4
14 ತಿಳಿವುಗಳ ಹೋಲಿಕೆ  

ಯೂದನಿಗೆ ತಾಮರ ಎಂಬವಳಿಂದ, ಪೆರಸ್ ಹಾಗೂ ಜೆರಹನ್ ಹುಟ್ಟಿದರು.


ನಹಸ್ಸೋನ್ ಅಮ್ಮಿನದಾಬನಿಗೆ, ಅಮ್ಮಿನಾದಾಬನು ಅದ್ಮಿನನಿಗೆ, ಅದ್ಮಿನ್ ಆರ್ನೈಯನಿಗೆ, ಆರ್ನೈಯ ಹೆಸ್ರೋನನಿಗೆ, ಹೆಸ್ರೋನ್ ಪೆರೆಸನಿಗೆ, ಪೆರೆಸ್ ಯೂದನಿಗೆ ಹುಟ್ಟಿದರು.


ಮೆಷೇಜಬೇಲನ ಮಗನೂ ಜೆರಹನ ಸಂತಾನದವನೂ ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರಭಾರಿಯಾಗಿದ್ದನು.


ಜೆರುಸಲೇಮಿನಲ್ಲಿ ಯೆಹೂದನ ಗೋತ್ರದ ಆರುನೂರ ತೊಂಬತ್ತು ಕುಟುಂಬಗಳು ನೆಲಸಿದವು. ಯೆಹೂದನ ಮಗ ಪೆರೆಚನ ಸಂತತಿಯವರಿಗೆ ಅಮ್ಮೀಹೂದನ ಮಗನೂ ಒಮ್ರಿಯ ಮೊಮ್ಮಗನೂ ಆದ ಊತೈ ನಾಯಕನಾಗಿದ್ದನು. ಇಮ್ರಿ ಮತ್ತು ಬಾನಿ ಎಂಬವರು ಅವನ ಪೂರ್ವಜರಲ್ಲಿ ಇಬ್ಬರು. ಯೆಹೂದನ ಮಗ ಶೇಲಾಹನ ಸಂತಾನದವರಿಗೆ ಆಸಾಯನು ನಾಯಕ ಹಾಗೂ ಗೋತ್ರದ ಮುಖ್ಯಸ್ಥನಾಗಿದ್ದನು. ಯೆಹೂದನ ಮಗ ಜೆರಹನ ಸಂತತಿಯವರಿಗೆ ಯೆಯೂವೇಲ್ ನಾಯಕನಾಗಿದ್ದನು.


ಪೆರೆಚನಿಂದ ದಾವೀದನವರೆಗಿನ ವಂಶಾವಳಿ: ಪೆರೆಚನಿಗೆ ಹೆಚ್ರೋನನು, ಹೆಚ್ರೋನನಿಗೆ ರಾಮನು, ರಾಮನಿಗೆ ಅಮಿನದಾಬನು ಹುಟ್ಟಿದರು. ಅಮಿನದಾಬನಿಗೆ ನಹಶೋನ, ನಹಶೋನನಿಗೆ ಸಲ್ಮೋನ್, ಸಲ್ಮೋನನಿಗೆ ಬೋವಜನು ಹುಟ್ಟಿದರು. ಬೋವಜನಿಗೆ ಓಬೇದ್, ಓಬೇದನಿಗೆ ಜೆಸ್ಸಯ, ಜೆಸ್ಸಯನಿಗೆ ದಾವೀದ ಹುಟ್ಟಿದರು.


ಬೆತ್ಲೆಹೇಮಿನಲ್ಲಿ ಘನವಂತನಾಗು! ಆ ಯುವತಿಯ ಮುಖಾಂತರ ಸರ್ವೇಶ್ವರ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆತನವು, ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆತನದಂತೆ ಪ್ರಖ್ಯಾತವಾಗಲಿ!” ಎಂದು ಹರಸಿದರು.


ಜೆರಹನಿಂದ ಜೆರಹಿಯರು, ಸೌಲನಿಂದ ಸೌಲ್ಯರು ಎ0ಬ ವ0ಶಸ್ಥರು.


ಅನಂತರ ಯೆಹೂದನು, ಬಹುಶಃ ಶೇಲಹನು ಕೂಡ ತನ್ನ ಅಣ್ಣಂದಿರಂತೆ ಸತ್ತಾನೆಂದು ಆಲೋಚಿಸಿ, ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿ ತೌರುಮನೆಯಲ್ಲಿರು,” ಎಂದು ನೆವಹೇಳಿದನು. ಅಂತೆಯೇ ಅವಳು ತೌರುಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.


ಪೆರೆಚನಿಗೆ ಹೆಚ್ರೋನ್, ಹಾಮುಲ್ ಎಂಬಿಬ್ಬರು ಮಕ್ಕಳು.


ಯೆಹೂದನ ವಂಶಜರು: ಪೆರೆಚ್, ಹೆಚ್ರೋನ್, ಕರ್ಮೀ, ಹೂರ್ ಮತ್ತು ಶೋಬಾಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು