Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:42 - ಕನ್ನಡ ಸತ್ಯವೇದವು C.L. Bible (BSI)

42 ಕಾಲೇಬನ ಚೊಚ್ಚಲು ಮಗನಿಗೆ ಅಂದರೆ ಯೆರಹ್ಮೇಲನ ಸಹೋದರನಿಗೆ ಮೇಷ ಎಂದು ಹೆಸರಿಡಲಾಗಿತ್ತು. ಮೇಷನು ಜೀಫ್ಯನ ತಂದೆ, ಇವನು ಮಾರೇಷನ ತಂದೆ, ಇವನು ಹೆಬ್ರೋನನ ತಂದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಯೆರಹೇಲ್ಮನ ಸಹೋದರನಾದ ಕಾಲೇಬನ ಸಂತಾನದವರು: ಚೊಚ್ಚಲನು ಜೀಫ್ಯರ ಮೂಲಪುರುಷನಾದ ಮೇಷನು, ಎರಡನೆಯವನು ಮಾರೇಷನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಯೆರಹ್ಮೇಲನ ಸಹೋದರನಾದ ಕಾಲೇಬನ ಸಂತಾನದವರು - ಚೊಚ್ಚಲನೂ ಜೀಫ್ಯರ ಮೂಲಪುರುಷನೂ ಆದ ಮೇಷನು, ಮಾರೇಷ ವಂಶದವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಕಾಲೇಬನು ಯೆರಹ್ಮೇಲನ ತಮ್ಮ. ಅವನಿಗೆ ಕೆಲವು ಗಂಡುಮಕ್ಕಳಿದ್ದರು. ಚೊಚ್ಚಲಮಗನು ಮೇಷ. ಮೇಷನು ಜೀಫ್ಯನ ತಂದೆ. ಮಾರೇಷನು ಸಹ ಕಾಲೇಬನ ಮಗ. ಮಾರೇಷನು ಹೆಬ್ರೋನನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಯೆರಹ್ಮೇಲನ ಸಹೋದರನಾದ ಕಾಲೇಬನ ಪುತ್ರರು: ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಹೆಬ್ರೋನನ ತಂದೆಯಾದ ಮಾರೇಷನಿಗೆ ಮಕ್ಕಳು ಜನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:42
20 ತಿಳಿವುಗಳ ಹೋಲಿಕೆ  

ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಯೆಗೂವೇಲ, ಗಿಬ್ಯೋನ ಪಟ್ಟಣವನ್ನು ಕಟ್ಟಿಸಿ ಅಲ್ಲಿ ನೆಲೆಸಿದನು. ಅವನ ಹೆಂಡತಿ ಮಾಕ ಎಂಬುವಳು.


ಕಿರ್ಯತ್ಯಾರೀಮ್ ಪಟ್ಟಣದ ಸ್ಥಾಪಕ ಶೋಬಾಲನು ಹರೋಯೆ ಜನರ, ಮಾನಹತಿಯರ ಅರ್ಧದಷ್ಟು ಜನರ,


ಅನಂತರ ಅವಳಿಗೆ ಮತ್ತೆ ಇಬ್ಬರು ಮಕ್ಕಳು ಜನಿಸಿದರು: ಮದ್ಮನ್ನ ಪಟ್ಟಣವನ್ನು ಕಟ್ಟಿಸಿದ ಶಾಫ್ ಒಬ್ಬನು. ಮಕ್‍ಬೇನ ಮತ್ತು ಗಿಬ್ಯ ಪಟ್ಟಣಗಳನ್ನು ಕಟ್ಟಿಸಿದ ಶೆವ ಇನ್ನೊಬ್ಬನು. ಇವರಲ್ಲದೆ ಕಾಲೇಬನಿಗೆ ಅಕ್ಸಾಹ ಎಂಬ ಹೆಣ್ಣು ಮಗಳು ಇದ್ದಳು.


ಇವನು ಮಾವೋನ್ಯನ ತಂದೆ, ಇವನು ಬೇತ್ಸೂರನ ತಂದೆ.


ಜೀಫ್ಯರಲ್ಲಿ ಕೆಲವರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ದಾವೀದನು ಮರುಭೂಮಿಯ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ; ಇದು ನಿಮಗೆ ಗೊತ್ತೇ?’ ಎಂದರು.


ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ಒಡೆಯಾ, ಆಲಿಸಬೇಕು; ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ ಅಂದರೆ ಮರುಭೂಮಿಯ ದಕ್ಷಿಣದಲ್ಲಿ ಇರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.


ಜೀಪ್, ಟೆಲೆಮ್, ಬೆಯಾಲೋತ್,


ರೂಬೇನನೇ, ನೀನೆನ್ನ ಜೇಷ್ಠಪುತ್ರನು ನನ್ನ ಚೈತನ್ಯಸ್ವರೂಪನು, ನನ್ನ ವೀರ್ಯದ ಪ್ರಥಮ ಫಲ ನೀನು ಹಿರಿಮೆಯಲು, ಒಲುಮೆಯಲು ಪ್ರಮುಖನೆನಿಸಿಕೊಳ್ಳುವವನು.


ಹೆಬ್ರೋನನಿಗೆ ಕೋರಹ, ತಪ್ಪೂಹ, ರೆಕೆಮ್ ಮತ್ತು ಶೆವು ಎಂಬ ನಾಲ್ವರು ಮಕ್ಕಳು ಇದ್ದರು.


ಆಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ ಎಂಬ ಒಂಬತ್ತು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.


ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,


ಹೆಚ್ರೋನನಿಗೆ ಮೂರು ಜನ ಮಕ್ಕಳು ಇದ್ದರು. ಅವರು - ಯೆರಹ್ಮೇಲ್, ರಾಮ್ ಮತ್ತು ಕೆಲೂಬಾಯ್ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು