Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:51 - ಕನ್ನಡ ಸತ್ಯವೇದವು C.L. Bible (BSI)

51 ಅವನ ಇನ್ನೊಬ್ಬ ಮಗ ಸಲ್ಮ ಬೆತ್ಲೆಹೇಮನ್ನೂ ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಬೇತ್ಲೆಹೇಮ್ಯರ ಮೂಲಪುರುಷನಾದ ಸಲ್ಮ ಮತ್ತು ಬೇತ್ಗಾದೇರಿನ ಮೂಲಪುರುಷನಾದ ಹಾರೇಫ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಬೇತ್ಗಾದೇರಿನವರ ಮೂಲಪುರುಷನಾದ ಹಾರೇಫ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಬೆತ್ಲೆಹೇಮನ್ನು ಕಟ್ಟಿದವನಾದ ಸಲ್ಮ ಮತ್ತು ಬೇತ್ಗಾದೇರ್ ಕಟ್ಟಿದವನಾದ ಹಾರೇಫ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಅವನ ಇನ್ನೊಬ್ಬ ಮಗ ಸಲ್ಮ ಬೇತ್ಲೆಹೇಮನ್ನೂ, ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:51
11 ತಿಳಿವುಗಳ ಹೋಲಿಕೆ  

‘ಆತ ದಾವೀದ ವಂಶಜನು; ಆತನು ಹುಟ್ಟುವುದು ದಾವೀದನ ಊರಾದ ಬೆತ್ಲೆಹೇಮಿನಲ್ಲಿ’ ಎಂದು ಪವಿತ್ರಗ್ರಂಥವೇ ಹೇಳಿದೆಯಲ್ಲವೆ?” ಎಂದು ವಾದಿಸಿದರು.


‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.


ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.


ಆಗ ಊರಿನ ಹಿರಿಯರು ಮತ್ತು ನೆರೆದಿದ್ದ ಸಭಿಕರು: “ಹೌದು, ನಾವೆಲ್ಲರೂ ಸಾಕ್ಷಿಗಳು. ಇಸ್ರಯೇಲಿನ ಮನೆತನವನ್ನು ವೃದ್ಧಿಗೊಳಿಸಿದ ರಾಹೆಲ್ ಮತ್ತು ಲೆಯಾ ಎಂಬ ಕುಲೀನೆಯರನ್ನು ಸರ್ವೇಶ್ವರ ಆಶೀರ್ವದಿಸಲಿ! ಎಫ್ರಾತ ಕುಲದಲ್ಲಿ ಧನವಂತನಾಗು;


ಸ್ವಲ್ಪ ಹೊತ್ತಾದ ಮೇಲೆ, ಇದ್ದಕ್ಕಿದ್ದ ಹಾಗೆ ಬೋವಜನು ಬೆತ್ಲೆಹೇಮಿನಿಂದ ಅಲ್ಲಿಗೆ ಬಂದನು. ಅವನು, “ಸರ್ವೇಶ್ವರಸ್ವಾಮಿ ನಿಮ್ಮೊಡನೆ ಇರಲಿ!” ಎಂದು ಕೆಲಸದಾಳುಗಳನ್ನು ವಂದಿಸಿದನು. ಅದಕ್ಕೆ ಅವರು, “ಸರ್ವೇಶ್ವರ ನಿಮ್ಮನ್ನೂ ಹರಸಲಿ!” ಎಂದು ಪ್ರತಿವಂದನೆ ಮಾಡಿದರು.


ಹಾಗೆಯೇ ಪ್ರಯಾಣವನ್ನು ಮುಂದುವರೆಸಿ ಅವರಿಬ್ಬರೂ ಬೆತ್ಲೆಹೇಮನ್ನು ತಲುಪಿದರು. ಅವರು ಊರಿಗೆ ಹಿಂದಿರುಗಿ ಬಂದ ಸಂಗತಿ ಜನರಲ್ಲಿ ಕುತೂಹಲ ಮೂಡಿಸಿತು. ಊರಿನ ಹೆಂಗಸರು, “ಈಕೆ ನವೊಮಿಯಲ್ಲವೇ?” ಎಂದು ವಿಚಾರಿಸತೊಡಗಿದರು.


ಅನಂತರ ರಾಖೇಲಳು ಸತ್ತುಹೋದಳು, ಆಕೆಯನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಸಮಾಧಿ ಮಾಡಿದರು.


ಇನ್ನುಳಿದ ಕಾಲೇಬನ ವಂಶಜರು: ಕಾಲೇಬನಿಗೆ ಅವನ ಹೆಂಡತಿ ಎಫ್ರಾತಳಿಂದ ಜನಿಸಿದ ಚೊಚ್ಚಲ ಮಗನ ಹೆಸರು ಹೂರ ಎಂದು. ಹೂರನ ಮಗ ಶೋಬಾಲ್ - ಕಿರ್ಯತ್ಯಾರೀಮ್ ಪಟ್ಟಣವನ್ನೂ


ಕಿರ್ಯತ್ಯಾರೀಮ್ ಪಟ್ಟಣದ ಸ್ಥಾಪಕ ಶೋಬಾಲನು ಹರೋಯೆ ಜನರ, ಮಾನಹತಿಯರ ಅರ್ಧದಷ್ಟು ಜನರ,


ಇಸ್ರಯೇಲ್ ನಾಡಿನಲ್ಲಿ ನ್ಯಾಯಸ್ಥಾಪಕರು ಆಳುತ್ತಿದ್ದಾಗ, ಒಮ್ಮೆ ಕಠಿಣವಾದ ಬರಗಾಲವು ತಲೆದೋರಿತು. ಈ ಕಾರಣ ಜುದೇಯ ಪ್ರಾಂತ್ಯದ ಬೆತ್ಲೆಹೇಮ್ ಎಂಬ ಊರಿನವನೊಬ್ಬನು ತನ್ನ ಪತ್ನಿ ಮತ್ತು ಪುತ್ರರಿಬ್ಬರನ್ನು ಕರೆದುಕೊಂಡು ಮೋವಾಬ್ ಎಂಬ ನಾಡಿಗೆ ವಲಸೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು