Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:7 - ಕನ್ನಡ ಸತ್ಯವೇದವು C.L. Bible (BSI)

7 ಜೆರಹನ ಸಂತತಿಯಲ್ಲಿ ಕರ್ಮಿಯ ಮಗ ಆಕಾರನು ಸರ್ವೇಶ್ವರನಿಗೆ ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡದ್ದರಿಂದ ಇಸ್ರಯೇಲರಿಗೆ ಆಪತ್ತನ್ನು ತಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನಿಗೆ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ ಆಕಾರನು ಕರ್ಮೀಯನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ ಆಕಾರನು ಕರ್ಮೀಯಿಂದ ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 (ಕರ್ಮೀಯು ಜಿಮ್ರಿಯ ಮಗನು.) ಜಿಮ್ರಿಯು ಆಕಾನನ ಮಗನು. ಈ ಆಕಾನನು ಯುದ್ಧದಲ್ಲಿ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರೇಲರಿಗೆ ದೊಡ್ಡ ಆಪತ್ತನ್ನು ತಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕರ್ಮೀಯ ಪುತ್ರರು: ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲರನ್ನು ಆಪತ್ತಿಗೆ ಗುರಿಪಡಿಸಿದ ಆಕಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:7
10 ತಿಳಿವುಗಳ ಹೋಲಿಕೆ  

ನೀವಾದರೋ ಸರ್ವೇಶ್ವರನಿಗೆ ಮೀಸಲಾದ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ ಇಸ್ರಯೇಲರ ಪಾಳೆಯವೇ ಶಾಪಕ್ಕೆ ಗುರಿಯಾಗಿ ನಾಶವಾದೀತು.


ಜೆರಹನ ಮಗ ಆಕಾನನು ಸರ್ವೇಶ್ವರನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದ. ಆಗ ಸರ್ವೇಶ್ವರನ ಕೋಪ ಇಸ್ರಯೇಲರ ಸರ್ವಸಭೆಯ ಮೇಲೆ ಎರಗಿತು. ಅವನ ಪಾಪದ ನಿಮಿತ್ತ ಅವನೊಡನೆ ಅನೇಕರು ಸಾಯಬೇಕಾಯಿತಲ್ಲವೆ?” ಎಂದು ಹೇಳಿದರು.


ಯೆಹೋಶುವನು ಆಕಾನನಿಗೆ, “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ದಿನ ಸರ್ವೇಶ್ವರ ನಿನ್ನ ಮೇಲೆ ಆಪತ್ತು ಬರಮಾಡುವರು,” ಎಂದ ಕೂಡಲೆ ಇಸ್ರಯೇಲರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಕಲ್ಲೆಸೆದದ್ದು ಮಾತ್ರವಲ್ಲ, ಅವನಿಗೆ ಇದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟರು.


ಆ ಶಾಪಗ್ರಸ್ತ ವಸ್ತುಗಳಲ್ಲಿ ನೀವು ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು.


ನೀವು ಅಂಥ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ಅದು ಶಾಪಗ್ರಸ್ತವಾದ್ದರಿಂದ ಅಸಹ್ಯಪಟ್ಟು ಅದನ್ನು ಮುಟ್ಟಲೂಕೂಡದು.


ಯೆಹೂದನ ವಂಶಜರು: ಪೆರೆಚ್, ಹೆಚ್ರೋನ್, ಕರ್ಮೀ, ಹೂರ್ ಮತ್ತು ಶೋಬಾಲ್.


ಅವನ ಸಹೋದರ ಜೆರಹನಿಗೆ ಐದು ಜನ ಮಕ್ಕಳು: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್, ಮತ್ತು ದಾರ.


ಏತಾನನಿಗೆ ಅಜರ್ಯನೆಂಬ ಒಬ್ಬ ಮಗನಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು