Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 20:8 - ಕನ್ನಡ ಸತ್ಯವೇದವು C.L. Bible (BSI)

8 ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕನಿಂದಲೂ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗತ್ ಊರಿನ ರೆಫಾಯರನ್ನು ದಾವೀದನೂ ಅವನ ಜನರೂ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇವರು ಗತ್ ಊರಿನಲ್ಲಿದ್ದ ರೆಫಾಯರ ವಂಶಜರು. ಇವರು ದಾವೀದನಿಂದಲೂ ಅವನ ಜನರಿಂದಲೂ ಸಂಹಾರವಾಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 20:8
8 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.


ಅವನನ್ನು ರೆಫಾಯರಲ್ಲೊಬ್ಬನಾದ ಇಷ್ಬೀಬೆನೋಬ್ ಎಂಬವನು ಕೊಲ್ಲುವುದಕ್ಕಿದ್ದನು. ಅವನ ಭರ್ಜಿಯ ತಾಮ್ರ ಮುನ್ನೂರು ಬೆಳ್ಳಿ ನಾಣ್ಯದ ತೂಕದ್ದು; ಅವನು ಸೊಂಟಕ್ಕೆ ಒಂದು ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.


ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.


ಅವನು ಇಸ್ರಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.


ಸೈತಾನನು ಇಸ್ರಯೇಲರಿಗೆ ವಿರೋಧವಾಗಿ ಎದ್ದು ಇಸ್ರಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು