Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:1 - ಕನ್ನಡ ಸತ್ಯವೇದವು C.L. Bible (BSI)

1 ಸೈತಾನನು ಇಸ್ರಯೇಲರಿಗೆ ವಿರೋಧವಾಗಿ ಎದ್ದು ಇಸ್ರಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೈತಾನನು ಇಸ್ರಾಯೇಲ್ಯರಿಗೆ ವಿರೋಧವಾಗಿ ಎದ್ದು ಖಾನೇಷುಮಾರಿಮಾಡುವದಕ್ಕೆ ದಾವೀದನನ್ನು ಪ್ರೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೈತಾನನು ಇಸ್ರೇಲರಿಗೆ ವಿರುದ್ಧವಾಗಿದ್ದನು. ಅವನು ಇಸ್ರೇಲರನ್ನು ಲೆಕ್ಕಿಸುವಂತೆ ದಾವೀದನನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:1
18 ತಿಳಿವುಗಳ ಹೋಲಿಕೆ  

ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ.


ಸ್ವರ್ಗನಿವಾಸಿಗಳು ಇನ್ನೊಂದು ದಿನ ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನು ಅವರ ಮಧ್ಯೆ ಕಾಣಿಸಿಕೊಂಡನು.


ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು : “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ.


ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


“ಸಿಮೋನನೇ, ಸಿಮೋನನೇ, ಕೇಳು: ಗೋದಿಯನ್ನು ತೂರುವಂತೆ ಸೈತಾನನು ನಿಮ್ಮೆಲ್ಲರನ್ನೂ ಶೋಧಿಸಲು ಅಪ್ಪಣೆ ಕೇಳಿಕೊಂಡಿದ್ದಾನೆ.


ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಅವರನ್ನು ಉಗ್ರವಾಗಿ ಪ್ರತಿಭಟಿಸಲಾರಂಭಿಸಿದರು. ಹಲವಾರು ವಿಷಯಗಳನ್ನು ಕುರಿತು ಮಾತಾಡುವಂತೆ ಕೆಣಕಿ,


ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.


ಪಾಪಪ್ರಲೋಭನೆಗೆ ಒಳಗಾದಾಗ, “ಈ ಪ್ರಲೋಭನೆಗಳು ದೇವರಿಂದಲೇ ಬಂದವು,” ಎಂದು ಯಾರೂ ಹೇಳದಿರಲಿ. ಏಕೆಂದರೆ, ದೇವರು ಸ್ವತಃ ಪಾಪಪ್ರಲೋಭನೆಗೆ ಗುರಿಯಾಗುವುದಿಲ್ಲ ಮತ್ತು ಯಾರನ್ನೂ ಅಂಥ ಪ್ರಲೋಭನೆಗೆ ಗುರಿಪಡಿಸುವುದಿಲ್ಲ.


ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕನಿಂದಲೂ ಹತರಾದರು.


ಚೆರೂಯಳ ಮಗ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಯೇಲರ ಮೇಲೆ ದೇವರ ಕೋಪವುಂಟಾಗಿ, ಅದನ್ನು ಪೂರ್ತಿಗೊಳಿಸಲಿಲ್ಲ. ಈ ಜನಗಣತಿ ದಾವೀದನ ರಾಜ್ಯದ ಇತಿಹಾಸದಲ್ಲಿ ಲಿಖಿತವಾಗಲಿಲ್ಲ.


“ನೀನು ಇಸ್ರಯೇಲರ ಜನಗಣತಿ ಮಾಡುವಾಗ ಲೆಕ್ಕಿಸಬೇಕಾದ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಸರ್ವೇಶ್ವರನಾದ ನನಗೆ ತೆರಿಗೆಯನ್ನು ಕೊಡಬೇಕು. ಆಗ ಅವರಿಗೆ ಯಾವ ವಿಪತ್ತು ಸಂಭವಿಸದು.


ಇವರೆಲ್ಲರೂ ಆಶೇರನ ವಂಶಜರು. ಇವರು ಕುಟುಂಬಗಳ ಮುಖ್ಯಸ್ಥರೂ ಯುದ್ಧವೀರರೂ ಶ್ರೇಷ್ಠನಾಯಕರೂ ಆಗಿದ್ದರು. ಆಶೇರನ ವಂಶಜರಲ್ಲಿ - 26,000 ಪುರುಷರು ಸೈನ್ಯದಲ್ಲಿ ಇರಲು ಅರ್ಹತೆ ಪಡೆದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು