Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:13 - ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ದಾವೀದನು, “ನಾನು ಬಹಳ ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೇ ಬೀಳುತ್ತೇನೆ; ಅವರು ಕೃಪಾಪೂರ್ಣರು, ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬೀಳುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬೀಳುವುದು ಮೇಲು. ಆತನು ಕೃಪಾಪೂರ್ಣನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಹಸ್ತದಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಗಾದನಿಗೆ ದಾವೀದನು, “ನಾನು ಈಗ ಕಷ್ಟದಲ್ಲಿ ಬಿದ್ದಿದ್ದೇನೆ! ನನ್ನ ಶಿಕ್ಷೆಯನ್ನು ಮನುಷ್ಯನು ನಿರ್ಧರಿಸಬಾರದು. ಯೆಹೋವನು ಕರುಣೆಯುಳ್ಳವನು. ಆದ್ದರಿಂದ ಆತನೇ ನಿರ್ಧರಿಸಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಯೆಹೋವ ದೇವರ ಕೈಯಲ್ಲಿಯೇ ಬೀಳುತ್ತೇನೆ. ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:13
31 ತಿಳಿವುಗಳ ಹೋಲಿಕೆ  

ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ I ಆತನಲ್ಲಿದೆ ಕರುಣೆ, ಪೂರ್ಣವಿಮೋಚನೆ II


ಜೀವಸ್ವರೂಪರಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಅದೆಷ್ಟು ಭಯಂಕರ!


ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ಅದನ್ನು ಮೆರವಣಿಗೆ ಮಾಡುತ್ತಾರೆ ಹೊತ್ತು ಹೆಗಲಮೇಲೆ ಪ್ರತಿಷ್ಠಾಪನೆ ಮಾಡುತ್ತಾರೆ ಇಟ್ಟು ಪೀಠದ ಮೇಲೆ. ಕೂಗಿಕೊಂಡರೂ ಜರುಗದದು ಅಲ್ಲಿಂದ ಉತ್ತರಿಸಿ ಬಿಡಿಸದು ಯಾರನ್ನು ಕಷ್ಟದಿಂದ.


ಒಳ್ಳೆಯವನು ದನಕರುಗಳಿಗೂ ದಯೆ ತೋರುವನು; ಕೆಟ್ಟವನು ತೋರುವ ಕರುಣೆಯು ಕ್ರೂರತನವಾಗುವುದು.


ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II


ಗ್ರಹಿಸಲಿಲ್ಲಾ ಪಿತೃಗಳು ನಿನ್ನದ್ಭುತಗಳನು ಈಜಿಪ್ಟಿನಲಿ I ಸ್ಮರಿಸಲಿಲ್ಲವರು ನಿನ್ನಚಲ ಪ್ರೇಮಾತಿಶಯಗಳನು ಅಲ್ಲಿ I ಬದಲಿಗೆ ಮಹೋನ್ನತನನೆ ಪ್ರತಿಭಟಿಸಿದರು ಕೆಂಗಡಲಬಳಿ II


ಪ್ರಭು ದಯಾಳು, ಕೃಪಾಪೂರ್ಣನು I ಸಹನಶೀಲನು, ಪ್ರೀತಿಮಯನು II


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ಆಲಿಸೆನ್ನ ಪ್ರಭು, ನಿನ್ನ ಪ್ರೀತಿ ಸುಮಧುರ I ಕಟಾಕ್ಷಿಸೆನ್ನನು ದೇವಾ, ಕರುಣಾಸಾಗರ II


ಪ್ರಸನ್ನಕಾಲದಲ್ಲಿ ಪ್ರಭು, ನಾ ಮೊರೆಯಿಡುತ್ತಿರುವೆ ನಿನಗೆ I ಪ್ರೀತಿಮಯ ದೇವಾ, ಜೀವೋದ್ಧಾರಕ, ಸದುತ್ತರ ನೀಡೆನಗೆ II


ನಿನ್ನ ಮಂದಿರಕೆ ಬರುವೆ ನಿನ್ನಪಾರ ಪ್ರೀತಿಯ ನಿಮಿತ್ತ I ಭಕುತಿಯಿಂದ ಅಡ್ಡಬೀಳುವೆ ನಿನ್ನ ಪವಿತ್ರಾಲಯದತ್ತ II


“ಅರಸನು ಹೇಳಿಕಳುಹಿಸಿದ ಹೊರತು ಅವನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವವರು ಮರಣದಂಡನೆಗೆ ಗುರಿಯಾಗುವರು ಎಂಬ ನಿಷೇಧಾಜ್ಞೆ ಸ್ತ್ರೀಪುರುಷರೆನ್ನದೆ ಎಲ್ಲರಿಗೂ ಅನ್ವಯಿಸುತ್ತದೆ. ಯಾರ ಕಡೆಗೆ ಅವನು ತನ್ನ ಸ್ವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು. ಇದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ನಿವಾಸಿಗಳಿಗೂ ತಿಳಿದ ವಿಷಯ; ನನಗಂತೂ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.


ಸಮಾರಿಯದಲ್ಲಿ ಸರ್ವೇಶ್ವರನ ಒಬ್ಬ ಪ್ರವಾದಿ ಇದ್ದನು. ಅವನ ಹೆಸರು ಓದೇದ್. ಅವನು ಸಮಾರಿಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು, “ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರ ಆಕಾಶವನ್ನು ಮುಟ್ಟಿತು.


ಪಟ್ಟಣದೊಳಗೆ ಕ್ಷಾಮ ಇರುವುದರಿಂದ ಅಲ್ಲಿಗೆ ಹೋದರೂ ಸಾಯಬೇಕು. ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಸಿರಿಯಾದವರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ,” ಎಂದು ಮಾತಾಡಿಕೊಂಡರು.


ದೈವಪುರುಷನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು, ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು, ತನ್ನ ಯಜಮಾನನಿಗೆ, “ಅಯ್ಯೋ! ಗುರುವೇ, ಏನು ಮಾಡೋಣ?” ಎಂದನು.


ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.


ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”


ಒಂದು ವೇಳೆ ದುಃಖಪಡಿಸಿದರೂ ಕೃಪಾತಿಶಯದಿಂದ ಕನಿಕರಿಸಬಲ್ಲ.


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ನಿನ್ನ ಕೃಪಾಕಾರ್ಯಗಳು, ಹೇ ಪ್ರಭೂ, ಅಪಾರ I ಚೇತನಗೊಳಿಸೆನ್ನನು, ನಿನ್ನ ವಿಧಿಗಳಿಗನುಸಾರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು