Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ಸರ್ವೇಶ್ವರನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಹೋಗಬೇಕೆಂದು ದಾವೀದನಿಗೆ ಹೇಳು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಯೆಹೋವನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವುದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಯೆಹೋವನ ದೂತನು ಗಾದನಿಗೆ - ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು ಎಂಬದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಯೆಹೋವನ ದೂತನು ಗಾದನೊಂದಿಗೆ ಮಾತನಾಡಿ, “ದಾವೀದನು ಒಂದು ಯಜ್ಞವೇದಿಕೆಯನ್ನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ಕಟ್ಟಿ ಯೆಹೋವನನ್ನು ಆರಾಧಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೆಹೋವ ದೇವರ ದೂತನು ಗಾದನಿಗೆ, “ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:18
7 ತಿಳಿವುಗಳ ಹೋಲಿಕೆ  

ಸೊಲೊಮೋನನು ಜೆರುಸಲೇಮ್ ಪಟ್ಟಣದಲ್ಲಿ ತನ್ನ ತಂದೆ ದಾವೀದನಿಗೆ ದೇವದರ್ಶನ ಉಂಟಾದ ಮೋರೀಯಾ ಗುಡ್ಡದಲ್ಲಿ, ಸರ್ವೇಶ್ವರನ ಆಲಯವನ್ನು ಕಟ್ಟಿಸ ತೊಡಗಿದನು. ಈ ಮೊದಲು, ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು, ದಾವೀದನು ಇದಕ್ಕಾಗಿ ಸಿದ್ಧಮಾಡಿದ್ದನು.


ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು, “ನೀವು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸಿ,” ಎಂದು ಹೇಳಿದನು.


ದೇವರು ಜೆರುಸಲೇಮನ್ನು ಸಹ ಸಂಹರಿಸಬೇಕೆಂದು ದೂತನನ್ನು ಕಳುಹಿಸಿದರು. ಆದರೆ ಆ ದೂತನು ಸಂಹರಿಸುವುದಕ್ಕಿದ್ದಾಗ ಸರ್ವೇಶ್ವರ ಅದನ್ನು ಕಂಡು, ಆ ಕೇಡಿನ ವಿಷಯದಲ್ಲಿ ದುಃಖಪಟ್ಟರು. ಸಂಹಾರಕ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದು ಆಜ್ಞಾಪಿಸಿದರು. ಆಗ ಸರ್ವೇಶ್ವರನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.


ಆಗ ಗಾದನು ದಾವೀದನ ಬಳಿಗೆ ಬಂದು, “ಸರ್ವೇಶ್ವರ ಹೇಳುವುದನ್ನು ಕೇಳು:


ದಾವೀದನು ಗಾದನ ಮುಖಾಂತರ ತನಗಾದ ಸರ್ವೇಶ್ವರನ ಅಪ್ಪಣೆಯಂತೆ ಹೊರಟನು.


“ಇದೇ ದೇವರಾದ ಸರ್ವೇಶ್ವರನ ಆಲಯ; ಇದೇ ಇಸ್ರಯೇಲರು ಬಲಿ ಅರ್ಪಿಸತಕ್ಕ ಪೀಠ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು