1 ಪೂರ್ವಕಾಲ ವೃತ್ತಾಂತ 21:26 - ಕನ್ನಡ ಸತ್ಯವೇದವು C.L. Bible (BSI)26 ಅಲ್ಲಿ ಸರ್ವೇಶ್ವರಸ್ವಾಮಿಗಾಗಿ ಬಲಿಪೀಠವನ್ನು ಕಟ್ಟಿಸಿದನು. ಅದರ ಮೇಲೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಿ ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಮೊರೆಯನ್ನು ಆಲಿಸಿ, ಆಕಾಶದಿಂದ ಬಲಿಪೀಠದ ಮೇಲೆ ಬೆಂಕಿಯನ್ನು ಬರಮಾಡಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಲ್ಲಿ ದಾವೀದನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿ, ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ, ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿ ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಲ್ಲಿ ದೇವರನ್ನು ಆರಾಧಿಸಲು ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ದಾವೀದನು ಅದರ ಮೇಲೆ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿದನು. ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಪರಲೋಕದಿಂದ ಬೆಂಕಿಯನ್ನು ಕಳುಹಿಸುವುದರ ಮೂಲಕ ದಾವೀದನಿಗೆ ಉತ್ತರಿಸಿದನು. ಸರ್ವಾಂಗಹೋಮಗಳ ಯಜ್ಞವೇದಿಕೆಯ ಮೇಲೆ ಬೆಂಕಿಯು ಇಳಿದುಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು. ಆಗ ಅವರು ಆಕಾಶದಿಂದ ದಹನಬಲಿಪೀಠದ ಮೇಲೆ ಅಗ್ನಿಯಿಂದ ಅವನಿಗೆ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿ |