Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:27 - ಕನ್ನಡ ಸತ್ಯವೇದವು C.L. Bible (BSI)

27 ಆ ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದರು. ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ದೇವರು ತನ್ನ ದೂತನಿಗೆ ಖಡ್ಗವನ್ನು ಒರೆಯಲ್ಲಿ ಹಾಕಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರು ದೂತನಿಗೆ ಹೇಳಿದ್ದರಿಂದ, ಅವನು ತನ್ನ ಖಡ್ಗವನ್ನು ಒರೆಗೆ ತಿರುಗಿ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:27
12 ತಿಳಿವುಗಳ ಹೋಲಿಕೆ  

ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಆಗ ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು, ನನ್ನ ಪಿತನೇ ಕೊಟ್ಟಿರುವ ಕಷ್ಟದ ಕೊಡವಿದು; ಇದರಲ್ಲಿರುವುದನ್ನು ನಾನು ಕುಡಿಯದೆಹೋದರೆ ಹೇಗೆ?” ಎಂದು ನುಡಿದರು.


ಆಗ ಯೇಸು ಅವನಿಗೆ, “ನಿನ್ನ ಖಡ್ಗವನ್ನು ಒರೆಗೆ ಹಾಕು. ಖಡ್ಗ ಎತ್ತಿದವರೆಲ್ಲರೂ ಖಡ್ಗದಿಂದಲೇ ಹತರಾಗುವರು.


ಕತ್ತಿಯನ್ನು ಒರೆಗೆ ಸೇರಿಸು. ನೀನು ಹುಟ್ಟಿದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ, ನಿನಗೆ ನ್ಯಾಯತೀರಿಸುವೆನು.


ಎಲೈ, ಸರ್ವೇಶ್ವರನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದಿರುವೆ? ಓರೆಯಲ್ಲಿ ಅವಿತುಕೊಂಡರು, ಶಾಂತಿಗೊಳ್ಳು, ಸುಮ್ಮನಿರು.


ಭಜಿಸಿರಿ ಪ್ರಭುವನು ದೇವದೂತರುಗಳೇ I ಆತನ ಆಣತಿ ಪಾಲಿಪ ಪರಾಕ್ರಮಿಗಳೇ I ಆತನ ನುಡಿಯಂತೆಯೇ ನಡೆಯುವ ಜನಾಂಗಗಳೇ II


ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ದೂತನನ್ನು ನೋಡಿದ್ದನು. ಅವನೊಡನಿದ್ದ ಅವನ ನಾಲ್ಕು ಮಂದಿ ಮಕ್ಕಳು ಅಡಗಿಕೊಂಡಿದ್ದರು.


‘ಮೂರು ವರ್ಷಗಳ ಕಾಲ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಇಸ್ರಯೇಲರ ಸಮಸ್ತ ಪ್ರಾಂತ್ಯಗಳಿಗೆ ಸರ್ವೇಶ್ವರ ಕಳುಹಿಸುವ ಸಂಹಾರಕ ದೂತನಿಂದ ಉಂಟಾಗುವ ಮೂರು ದಿನಗಳ ಘೋರ ವ್ಯಾಧಿರೂಪವಾದ ಸರ್ವೇಶ್ವರನ ಶಿಕ್ಷೆ ಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ’ ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದು ಹೇಳಿದನು.


ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಅಲ್ಲಿ ಸರ್ವೇಶ್ವರಸ್ವಾಮಿಗಾಗಿ ಬಲಿಪೀಠವನ್ನು ಕಟ್ಟಿಸಿದನು. ಅದರ ಮೇಲೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಿ ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಮೊರೆಯನ್ನು ಆಲಿಸಿ, ಆಕಾಶದಿಂದ ಬಲಿಪೀಠದ ಮೇಲೆ ಬೆಂಕಿಯನ್ನು ಬರಮಾಡಿ,


ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ಸರ್ವೇಶ್ವರನ ಗುಡಾರವೂ ಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲೇ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು