Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:30 - ಕನ್ನಡ ಸತ್ಯವೇದವು C.L. Bible (BSI)

30 ಆ ಕಾಲದಲ್ಲಿ ದಾವೀದನಿಗೆ ಸರ್ವೇಶ್ವರನಿಂದ ಸದುತ್ತರ ದೊರಕಿದ್ದರಿಂದ ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರದೊರಕಿದ್ದರಿಂದ ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದಾವೀದನು ದೇವರ ಸಂಗಡ ಮಾತನಾಡಲು ಭಯಪಟ್ಟದ್ದರಿಂದ ದೇವದರ್ಶನ ಗುಡಾರಕ್ಕೆ ಹೋಗಲಿಲ್ಲ. ಅವನು ಖಡ್ಗಧಾರಿಯಾಗಿದ್ದ ದೇವದೂತನಿಗೂ ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದಾವೀದನು ದೇವರ ಹತ್ತಿರ ವಿಚಾರಿಸಲು, ಅದರ ಬಳಿಗೆ ಹೋಗಲಾರದೆ ಇದ್ದನು. ಏಕೆಂದರೆ ಅವನು ಯೆಹೋವ ದೇವರ ದೂತನ ಖಡ್ಗದ ನಿಮಿತ್ತ ಹೆದರಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:30
16 ತಿಳಿವುಗಳ ಹೋಲಿಕೆ  

ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.


ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


ನಿನ್ನ ಕೋಪದಾ ಪ್ರತಾಪವನು ಬಲ್ಲವನಾರು? I ಭಯಂಕರ ರೌದ್ರವನು ಅನುಭವಿಸುವವರಾರು? II


ಈ ಕಾರಣ ಆತನ ಸನ್ನಿಧಿಯಲಿ ನಾನು ಅಂಜುಬುರುಕ ಇದನ್ನು ನೆನೆದು ಮನದಲಿ ನಾನು ಭಯಪೀಡಿತ.


ಇದನು ನೆನೆದಾಗ ನನಗೆ ತಲ್ಲಣವಾಗುತ್ತದೆ ನನ್ನ ದೇಹಕ್ಕೆ ನಡುಕ ಬರುತ್ತದೆ:


ಹಿಂತೆಗೆದುಕೊ ನನ್ನ ಮೇಲೆತ್ತಿರುವ ನಿನ್ನ ಕೈಗಳನು ಅಂಜಿಕೆಗೀಡು ಮಾಡದಿರಲಿ ನಿನ್ನ ದಿಗಿಲು ನನ್ನನು.


ದಾವೀದನು ಕಣ್ಣೆತ್ತಿ ನೋಡಿ ಸರ್ವೇಶ್ವರನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ ಚಾಚಿದ ಕೈಯಲ್ಲಿ ಜೆರುಸಲೇಮಿಗೆ ವಿರೋಧವಾಗಿ ಹಿರಿದ ಕತ್ತಿ ಇರುವುದನ್ನೂ ಕಂಡನು. ಆಗ ಅವನೂ ಹಿರಿಯರೂ ಗೋಣಿತಟ್ಟನ್ನು ಉಟ್ಟುಕೊಂಡು ಬೋರಲಾಗಿ ಬಿದ್ದರು.


ಸರ್ವೇಶ್ವರನ ಭಯದಿಂದ ದಾವೀದನು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಈಗ ಹೇಗೆ ತಾನೆ ತೆಗೆದುಕೊಂಡು ಹೋಗಲಿ?” ಎಂದು ಕಳವಳಪಟ್ಟನು.


ಆ ದಿನ ದಾವೀದನು ಸರ್ವೇಶ್ವರನಿಗೆ ಭಯಪಟ್ಟನು; ಆ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ ಎಂದು ಆಲೋಚಿಸಿದನು.


“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


ಆದರೂ ದಾವೀದನು ಸರ್ವೇಶ್ವರನ ದೂತ ಹಿಡಿದಿದ್ದ ಕತ್ತಿಗೆ ಹೆದರಿ, ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಬಲಿಯರ್ಪಿಸಿದನು.


“ಇದೇ ದೇವರಾದ ಸರ್ವೇಶ್ವರನ ಆಲಯ; ಇದೇ ಇಸ್ರಯೇಲರು ಬಲಿ ಅರ್ಪಿಸತಕ್ಕ ಪೀಠ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು