1 ಪೂರ್ವಕಾಲ ವೃತ್ತಾಂತ 21:8 - ಕನ್ನಡ ಸತ್ಯವೇದವು C.L. Bible (BSI)8 ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ದೇವರನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ದೇವರನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ದಾವೀದನು - ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ; ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷವಿುಸು ಎಂದು ದೇವರನ್ನು ಪ್ರಾರ್ಥಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದಾವೀದನು ದೇವರಿಗೆ, “ನಾನು ಕೇವಲ ಹುಚ್ಚು ಕೆಲಸ ಮಾಡಿದೆನು. ಇಸ್ರೇಲರ ಜನಗಣತಿ ಮಾಡಿ ಪಾಪಮಾಡಿದೆನು. ಈಗ ನಿನ್ನ ಸೇವಕನಾದ ನನ್ನ ಪಾಪವನ್ನು ನಿರ್ಮೂಲ ಮಾಡು” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದಾವೀದನು ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ, ಮಹಾಪಾಪ ಮಾಡಿದೆನು. ನೀವು ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ. ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು. ಅಧ್ಯಾಯವನ್ನು ನೋಡಿ |