Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:16 - ಕನ್ನಡ ಸತ್ಯವೇದವು C.L. Bible (BSI)

16 ಏಳು, ಕೆಲಸಕ್ಕೆ ಕೈಹಾಕು; ಸರ್ವೇಶ್ವರ ನಿನ್ನೊಂದಿಗಿರಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಶಿಲ್ಪಿಗರೂ ಬಡಗಿಯವರೂ ಬಂಗಾರ ಬೆಳ್ಳಿ ತಾಮ್ರ ಕಬ್ಬಿಣಗಳ ಎಲ್ಲಾ ತರದ ಕೆಲಸವನ್ನು ಮಾಡುವದರಲ್ಲಿ ಜಾಣರೂ ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವದಕ್ಕಾಗುವದಿಲ್ಲ. ಏಳು, ಕೆಲಸಕ್ಕೆ ಕೈಹಾಕು; ಯೆಹೋವನು ನಿನ್ನ ಸಂಗಡ ಇರಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಂಗಾರದ ಕೆಲಸಗಾರರೂ ಬೆಳ್ಳಿ, ತಾಮ್ರ, ಕಬ್ಬಿಣದ ಕೆಲಸಗಾರರೂ ಲೆಕ್ಕವಿಲ್ಲದಷ್ಟು ಇದ್ದಾರೆ. ಈಗ ನೀನು ಕೆಲಸ ಪ್ರಾರಂಭಿಸು. ದೇವರು ನಿನ್ನ ಸಂಗಡವಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಚಿನ್ನ, ಬೆಳ್ಳಿ, ಕಂಚು, ಕಬ್ಬಿಣ, ಮುಂತಾದವುಗಳಲ್ಲಿ ನಿಪುಣರು ಲೆಕ್ಕವಿಲ್ಲದಷ್ಟು ಇದ್ದಾರೆ. ಎದ್ದು ಕೆಲಸ ಮಾಡು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:16
22 ತಿಳಿವುಗಳ ಹೋಲಿಕೆ  

“ನನ್ನ ಮಗನೇ, ನೀನು ಕೃತಾರ್ಥನಾಗಬೇಕು; ನಿನ್ನ ದೇವರಾದ ಸರ್ವೇಶ್ವರ ನನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟಬೇಕು. ಆ ಸರ್ವೇಶ್ವರ ನಿನ್ನೊಂದಿಗಿರಲಿ!


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಸರ್ವೇಶ್ವರ ಯೆಹೋಶುವನಿಗೆ ಹೀಗೆ ಎಂದರು : “ನೀನು ಅಧೋಮುಖವಾಗಿ ಬಿದ್ದು ಇರುವುದೇಕೆ, ಏಳು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ಇಗೋ, ನಾನು ಬಹಳ ಪ್ರಯಾಸಪಟ್ಟು ಸರ್ವೇಶ್ವರನ ಆಲಯಕ್ಕಾಗಿ 3,400 ಮೆಟ್ರಿಕ್ ಟನ್ ಬಂಗಾರವನ್ನು 34,000 ಮೆಟ್ರಿಕ್ ಟನ್ ಬೆಳ್ಳಿಯನ್ನು ಹಾಗು ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ, ಕಲ್ಲುಮರಗಳನ್ನೂ ಕೂಡಿಸಿದ್ದೇನೆ.


ಇದಲ್ಲದೆ, ಬಾಗಿಲುಗಳ ಕದಗಳಿಗೆ ಬೇಕಾದ ಮೊಳೆಗಳನ್ನು ಹಾಗು ಪಟ್ಟಿಗಳನ್ನು ಮಾಡುವುದಕ್ಕೆ ಬಹಳ ಕಬ್ಬಿಣವನ್ನೂ ತೂಕ ಮಾಡಲಾಗದಷ್ಟು ತಾಮ್ರವನ್ನೂ


ನನ್ನ ತಂದೆ ನಿನಗೆ ಕೇಡುಮಾಡಲು ಮನಸ್ಸುಮಾಡಿದ್ದಾರೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ, ಸರ್ವೇಶ್ವರ ನನಗೆ ಏನು ಬೇಕಾದರೂ ಮಾಡಲಿ. ಅವರು ನನ್ನ ತಂದೆಯೊಂದಿಗೆ ಇದ್ದಹಾಗೆ ನಿನ್ನೊಂದಿಗೂ ಇರಲಿ.


ನನ್ನನ್ನು ಅಂಥ ಕರಡಿ-ಸಿಂಹಗಳ ಉಗುರುಗಳಿಂದ ತಪ್ಪಿಸಿದ ಸರ್ವೇಶ್ವರ ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವರು,” ಎಂದು ಹೇಳಿದನು. ಅದಕ್ಕೆ ಸೌಲನು, “ಹೋಗು, ಸರ್ವೇಶ್ವರ ನಿನ್ನೊಂದಿಗೆ ಇರಲಿ!” ಎಂದನು.


ಆಗ ದೆಬೋರಳು ಬಾರಾಕನಿಗೆ, “ಏಳು, ಸರ್ವೇಶ್ವರ ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನ ಇದೇ; ನಿಶ್ಚಯವಾಗಿ ಅವರು ತಾವೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವರು,” ಎಂದಳು. ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತ ತಾಬೋರ್ ಬೆಟ್ಟದಿಂದಿಳಿದನು.


ನೀನೀಗ ಎದ್ದು ಸಮಸ್ತ ಪ್ರಜೆಯೊಂದಿಗೆ ಜೋರ್ಡನ್ ನದಿಯನ್ನು ದಾಟಿ, ನಾನು ಇಸ್ರಯೇಲರಿಗೆ ಕೊಡುವ ನಾಡಿಗೆ ಹೋಗು.


ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.


ನೀನು ಇನ್ನೂ ಹೆಚ್ಚು ಕೂಡಿಸುವೆ. ಇದಲ್ಲದೆ, ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರು, ಶಿಲ್ಪಿಗಳು, ಬಡಗಿಯವರು ಹಾಗು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಈ ಮುಂತಾದ ಕೆಲಸವನ್ನು ಮಾಡುವ ನಿಪುಣರು ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವುದಕ್ಕಾಗುವುದಿಲ್ಲ.


“ಜಗದ ಜನರೆಲ್ಲರು ಹೋಗುವ ದಾರಿಯನ್ನು ನಾನು ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು. ನಿನ್ನ ಸಾಮರ್ಥ್ಯವನ್ನು ತೋರಿಸು.


ಸೊಲೊಮೋನನು ತಾನು ಮಾಡಿಸಿದ ಸಾಮಗ್ರಿಗಳು ಅನೇಕವಾಗಿದ್ದುದರಿಂದ ಅವುಗಳ ತಾಮ್ರದ ತೂಕ ಇಷ್ಟೆಂಬುದನ್ನು ನಿರ್ಧರಿಸಲಾಗಲಿಲ್ಲ.


ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು.


ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ, ಇವುಗಳನ್ನೂ ಗೋಮೇಧಕ ರತ್ನ ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪುಹರಳು, ವಿವಿಧ ವರ್ಣದ ಕಲ್ಲು, ತರತರದ ಮಣೆ, ಚಂದ್ರಕಾಂತ ಇವುಗಳನ್ನೂ ನನ್ನ ದೇವರ ಮಂದಿರಕ್ಕಾಗಿ ರಾಶಿರಾಶಿಯಾಗಿ ಸಂಗ್ರಹಿಸಿದ್ದೇನೆ.


ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದ ಮೇಲೆ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಸರ್ವೇಶ್ವರಸ್ವಾಮಿ ಅವನನ್ನು ಹರಸಿ ಮಹಾ ಬಲಾಢ್ಯನಾಗುವಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು