Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:1 - ಕನ್ನಡ ಸತ್ಯವೇದವು C.L. Bible (BSI)

1 ದಾವೀದನು ಹಣ್ಣುಹಣ್ಣು ಮುದುಕನಾದಾಗ ತನ್ನ ಮಗ ಸೊಲೊಮೋನನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನು ಮುಪ್ಪಿನ ಮುದುಕನಾದಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನು ಬಹಳ ಮುದುಕನಾದಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರೇಲರ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನು ಮುದುಕನಾದ ಮೇಲೆ ತನ್ನ ಮಗ ಸೊಲೊಮೋನನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:1
12 ತಿಳಿವುಗಳ ಹೋಲಿಕೆ  

ಸಿರಿಸಂಪತ್ತು, ಘನತೆ, ಗೌರವ ಹಾಗೂ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದನಂತರ ದಾವೀದನು ಹಣ್ಣುಮುದುಕನಾಗಿ ಮರಣ ಹೊಂದಿದನು. ಅವನ ಉತ್ತರಾಧಿಕಾರಿಯಾಗಿ ಅವನ ಮಗ ಸೊಲೊಮೋನನು ಅರಸನಾದನು.


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.


ಅರಸ ದಾವೀದನು ಹಣ್ಣು ಹಣ್ಣು ಮುದುಕನಾದ; ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.


ನನ್ನ ತರುವಾಯ ನನ್ನ ಮಗ ಸೊಲೊಮೋನನೇ ಅರಸನಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು. ನಾನು ನಿನಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಈ ಪ್ರಮಾಣವನ್ನು ಈ ದಿನವೇ ನೆರವೇರಿಸುತ್ತೇನೆ,” ಎಂದನು.


ಸುಗ್ಗಿಕಾಲದಲ್ಲಿ ಕಾಳುತೆನೆ ಕಣ ಸೇರುವಂತೆ ವೃದ್ಧಾಪ್ಯ ಕಳೆದ ಮೇಲೆ ನೀನು ಸಮಾಧಿ ಸೇರುವೆ.


ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.


ಸೊಲೊಮೋನನು ತನ್ನ ತಂದೆ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯ ಸಮೃದ್ಧಿಯಾಗಿ ಬೆಳೆಯಿತು.


ಆಗ ಇಸ್ರಯೇಲರ ಎಲ್ಲಾ ಅಧಿಪತಿಗಳನ್ನು, ಯಾಜಕರನ್ನು ಹಾಗು ಲೇವಿಯರನ್ನು ತನ್ನ ಬಳಿಯಲ್ಲಿ ಸಭೆ ಸೇರಿಸಿದನು.


ಈ ಕಾರ್ಯ ನಮ್ಮ ಒಡೆಯರೂ ಅರಸರೂ ಆದ ನಿಮ್ಮಿಂದಲೇ ನಡೆದಿರುವುದಾದರೆ, ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನಿಮ್ಮ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ?” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು