Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ಇಸ್ರಯೇಲರ ಎಲ್ಲಾ ಅಧಿಪತಿಗಳನ್ನು, ಯಾಜಕರನ್ನು ಹಾಗು ಲೇವಿಯರನ್ನು ತನ್ನ ಬಳಿಯಲ್ಲಿ ಸಭೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಇಸ್ರಾಯೇಲರ ಎಲ್ಲಾ ಅಧಿಪತಿಗಳನ್ನೂ, ಯಾಜಕರನ್ನೂ ಮತ್ತು ಲೇವಿಯರನ್ನೂ ತನ್ನ ಬಳಿಯಲ್ಲಿ ಒಟ್ಟುಗೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರ ಎಲ್ಲಾ ಅಧಿಪತಿಗಳನ್ನೂ ಯಾಜಕರನ್ನೂ ಲೇವಿಯರನ್ನೂ ತನ್ನ ಬಳಿಯಲ್ಲಿ ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾವೀದನು ರಾಜ್ಯದ ಎಲ್ಲಾ ಮುಖಂಡರುಗಳನ್ನೂ ಯಾಜಕರನ್ನೂ ಲೇವಿಯರನ್ನೂ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:2
8 ತಿಳಿವುಗಳ ಹೋಲಿಕೆ  

ದಾವೀದನು ಇಸ್ರಯೇಲರ ಎಲ್ಲ ಪದಾಧಿಕಾರಿಗಳನ್ನು ಅಂದರೆ, ಕುಲ ಅಧ್ಯಕ್ಷರುಗಳು, ಅರಸನ ಸೇವೆಮಾಡುತ್ತಿದ್ದ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಹೀಗೆ ಎಲ್ಲ ಅಧಿಕಾರಿಗಳನ್ನು ಜೆರುಸಲೇಮಿಗೆ ಕರೆಸಿದನು.


ಅರಸ ದಾವೀದನು ಸರ್ವಸಹಸ್ರಾಧಿಪತಿಗಳೊಂದಿಗೂ ಶತಾಧಿಪತಿಗಳೊಂದಿಗೂ ಸಮಾಲೋಚನೆ ನಡೆಸಿದನು.


ತರುವಾಯ ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು.


ಆತ ಇಸ್ರಯೇಲರೆಲ್ಲರನ್ನು, ಅವರ ಹಿರಿಯರನ್ನು, ಮುಖ್ಯಸ್ಥರನ್ನು, ನ್ಯಾಯಾಧಿಪತಿಗಳನ್ನು ಹಾಗೂ ಅಧಿಕಾರಿಗಳನ್ನು ತನ್ನ ಬಳಿಗೆ ಕರೆಯಿಸಿದನು. ಅವರಿಗೆ, “ನಾನು ಮುಪ್ಪಿನ ಮುದುಕನಾದೆ.


ದಾವೀದನು ಹಣ್ಣುಹಣ್ಣು ಮುದುಕನಾದಾಗ ತನ್ನ ಮಗ ಸೊಲೊಮೋನನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದನು.


ಮೂವತ್ತು ವರ್ಷ ಮೊದಲ್ಗೊಂಡು ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆ ಮೂವತ್ತೆಂಟು ಸಾವಿರವಿತ್ತು.


ಹೀಗೆ ಕಾರ್ಯ ನಿರ್ವಹಿಸಿದವರ ಕುಟುಂಬಗಳ ಸರಣಿಯು ಇಂತಿದೆ: ಕೇಹತನ ಗೋತ್ರದವರು: ಪ್ರಥಮ ಸಂಗೀತಮಂಡಲಿಯ ನಾಯಕ ಯೋವೇಲನ ಮಗ ಹೇಮಾನ, ಇವನ ಹಿಂದಿನ ವಂಶಾವಳಿ ಯಕೋಬನವರೆಗೆ ಹೀಗಿದೆ: ಹೇಮಾನ, ಯೋವೇಲ, ಸಮುವೇಲ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು