Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:24 - ಕನ್ನಡ ಸತ್ಯವೇದವು C.L. Bible (BSI)

24 ಲೇವಿಯರ ಪಟ್ಟಿಯಲ್ಲಿ ಬರೆದಿರುವ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಮುಖ್ಯಸ್ಥರು. ಇವರಲ್ಲಿ ಇಪ್ಪತ್ತು ವರ್ಷ ಮೊದಲ್ಗೊಂಡು ಹೆಚ್ಚು ವಯಸ್ಸುಳ್ಳವರು ಸರ್ವೇಶ್ವರನ ಆಲಯದಲ್ಲಿ ಸೇವೆಮಾಡಲು ಅರ್ಹರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬ ಪ್ರಧಾನರು. ಇವರಲ್ಲಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇವರೇ ಲೇವಿಯರ ಸಂತತಿಯವರು. ಇವರೇ ಆಯಾ ಕುಟುಂಬಗಳ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಮೇಲ್ಪಟ್ಟವರನ್ನು ಮಾತ್ರ ಲೆಕ್ಕಿಸಲಾಯಿತು. ಅವರು ದೇವಾಲಯದಲ್ಲಿ ಸೇವೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಪುತ್ರರಾಗಿದ್ದರು. ತಮ್ಮ ಹೆಸರುಗಳಿಂದ, ಎಣಿಕೆಯಾಗಿದ್ದ ಇವರು ತಮ್ಮ ಕುಟುಂಬಗಳಲ್ಲಿ ಮುಖ್ಯಸ್ಥರಾಗಿದ್ದರು. ಇವರು ಇಪ್ಪತ್ತು ವರ್ಷ ಪ್ರಾಯದವರು ಮೊದಲುಗೊಂಡು, ಯೆಹೋವ ದೇವರ ಮನೆಯ ಸೇವೆಗೋಸ್ಕರ ಕೆಲಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:24
20 ತಿಳಿವುಗಳ ಹೋಲಿಕೆ  

ಮೂವತ್ತು ವರ್ಷ ಮೊದಲ್ಗೊಂಡು ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆ ಮೂವತ್ತೆಂಟು ಸಾವಿರವಿತ್ತು.


ಅವರ ಹಿಂದೆ ಕೆಹಾತ್ಯರು ದೇವಸ್ಥಾನದ ಸಾಮಾಗ್ರಿಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಮಿಕ್ಕ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಬಳಿಕ ದೇವದರ್ಶನದ ಗುಡಾರವನ್ನು ಇಳಿಸಿದ್ದೇ ಗೇರ್ಷೋನ್ಯರೂ ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.


ಹೀಗೆ ಜನರು ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್, ಯೋಚಾದಾಕನ ಮಗ ಯೇಷೂವ, ಇವರೂ ಇವರ ಸಹೋದರರಾದ ಇತರ ಯಾಜಕರು, ಲೇವಿಯರು, ಸೆರೆಯಿಂದ ಜೆರುಸಲೇಮಿಗೆ ಮರಳಿಬಂದ ಬೇರೆ ಎಲ್ಲರು ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದರು. ಇಪ್ಪತ್ತು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಲೇವಿಯರನ್ನು ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇಮಿಸಲಾಯಿತು.


“ಲೇವಿಯರು ಅನುಸರಿಸಬೇಕಾದ ಪದ್ಧತಿ ಇದು - ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನವರು ದೇವದರ್ಶನದ ಗುಡಾರದಲ್ಲಿ ಸೇವೆಮಾಡಲು ಸೇರಬೇಕು.


ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷ ಮೊದಲ್ಗೊಂಡು ಹೆಚ್ಚು ವಯಸ್ಸುಳ್ಳವರೆಲ್ಲರೂ ಲೆಕ್ಕಿಸಲ್ಪಟ್ಟರು.


ದೇವರ ಸೇವೆಗೆ ನಿಗದಿಯಾದ ನಾಣ್ಯಗಳ ಮೇರೆಗೆ ತೆಗೆದುಕೊಳ್ಳಬೇಕು.


ಮೆರಾರಿಯ ಮಕ್ಕಳು - ಮಹ್ಲೀ, ಮೂಷೀ ಎಂಬವರು. ಗೋತ್ರ ಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.


“ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನೆಲ್ಲಾ ಗೋತ್ರ ಕುಟುಂಬಗಳ ಪ್ರಕಾರ ಎಣಿಸಬೇಕು,” ಎಂದು ಆಜ್ಞಾಪಿಸಿದರು.


ಇವರೇ ಇಸ್ರಯೇಲರಲ್ಲಿ ಗೋತ್ರಗೋತ್ರಗಳ ಪ್ರಕಾರ ಎಣಿಕೆಯಾದವರು. ಆ ದಂಡುಗಳಲ್ಲಿ ಸೈನಿಕರಾಗಿ ಎಣಿಕೆಯಾದ ಸೈನಿಕರ ಸಂಖ್ಯೆ - 6,03,500:


ಸಿಮೆಯೋನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 59,300:


ಎರಡನೆಯ ತಿಂಗಳಿನ ಮೊದಲನೆ ದಿನ ಜನಸಮೂಹವನ್ನು ಕೂಡಿಸಿದರು. ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸಿನವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ, ಕುಟುಂಬಗಳ ಪ್ರಕಾರ ತಮ್ಮ ತಮ್ಮ ವಂಶಾವಳಿಯನ್ನು ತಿಳಿಸಿ ಹೆಸರುಗಳನ್ನು ನೊಂದಾಯಿಸಿಕೊಂಡರು.


ಮೂಷಿಗೆ ಮೆಹ್ಲೀ, ಏದೆರ್, ಯೆರೇಮೋತ್ ಎಂಬ ಮೂರು ಮಂದಿ ಮಕ್ಕಳಿದ್ದರು.


ಆ ಪಟ್ಟಿಯಲ್ಲಿ ಗೋತ್ರಗಳಿಗನುಸಾರ ಹಾಗು ಆಯಾ ಉದ್ಯೋಗ ವರ್ಗಗಳಿಗನುಸಾರ ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಯಾಜಕರು, ಲೇವಿಯರು,


ದೇವಸ್ಥಾನದ ವ್ಯವಹಾರವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು. ಆಗ ದೇವರ ಕೋಪ ಮತ್ತೆ ಇಸ್ರಯೇಲರ ಮೇಲೆ ಬಾರದು.


ಗೋಡೆಯನ್ನು ಕಟ್ಟಿ ಮುಗಿಸಿದನಂತರ ನಾನು ಕದಗಳನ್ನು ಹಚ್ಚಿಸಿದೆ; ದ್ವಾರಪಾಲಕರನ್ನೂ ಗಾಯಕರನ್ನೂ ಲೇವಿಯರನ್ನೂ ನೇಮಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು