Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:30 - ಕನ್ನಡ ಸತ್ಯವೇದವು C.L. Bible (BSI)

30-31 ಪ್ರತಿದಿನ ಬೆಳಿಗ್ಗೆ, ಸಂಜೆ ಮತ್ತು ನಿಯಮಿತ ಸಂಖ್ಯೆಗೆ ಸರಿಯಾಗಿ ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ, ಸರ್ವೇಶ್ವರನ ಮುಂದೆ ತಪ್ಪದೆ ನಡೆಯುವ ದಹನಬಲಿ ಸಮರ್ಪಣೆಯ ಹೊತ್ತಿನಲ್ಲಿ, ಸರ್ವೇಶ್ವರನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ನಿಯಮಿತ ಸಂಖ್ಯೆಗೆ ಸರಿಯಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಪ್ರತಿದಿನ ಮುಂಜಾನೆ ಮತ್ತು ಸಾಯಂಕಾಲ ದೇವಾಲಯದೊಳಗೆ ಸ್ತುತಿಗೀತೆಗಳನ್ನು ಹಾಡಿ ದೇವರನ್ನು ಮಹಿಮೆಪಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇದಲ್ಲದೆ ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ ನಿಂತು, ಯೆಹೋವ ದೇವರನ್ನು ಕೊಂಡಾಡುವುದಕ್ಕೂ, ಯೆಹೋವ ದೇವರನ್ನು ಸ್ತುತಿಸುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:30
19 ತಿಳಿವುಗಳ ಹೋಲಿಕೆ  

ಇನ್ನು ಕೆಲವು ಲೇವಿಯ ಕುಟುಂಬಗಳ ಮೇಲೆ ದೇವಾಲಯದ ಸಂಗೀತದ ಹೊಣೆಯಿತ್ತು. ಈ ಕುಟುಂಬಗಳ ಮುಖ್ಯಸ್ಥರು ದೇವಾಲಯದ ಕಟ್ಟಡಗಳಲ್ಲಿ ವಾಸಿಸುತ್ತಾ, ಹಗಲಿರುಳೂ ಕೆಲಸ ಮಾಡಬೇಕಾಗಿದ್ದರಿಂದ ಬೇರೆ ಕೆಲಸಗಳ ಜವಾಬ್ದಾರಿ ಅವರಿಗಿರಲಿಲ್ಲ.


ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.


ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ದಹನಬಲಿ, ಶಾಂತಿಸಮಾಧಾನ ಬಲಿ ಇವುಗಳನ್ನು ಸಮರ್ಪಿಸುವುದಕ್ಕೂ ಸರ್ವೇಶ್ವರನ ಪಾಳೆಯದ ದ್ವಾರಗಳಲ್ಲಿ ಸೇರಿ ಸರ್ವೇಶ್ವರನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವುದಕ್ಕೂ ಹಿಜ್ಕೀಯನು ನೇಮಿಸಿದನು.


ದೇವಾಲಯವನ್ನು ಕಾಯುವುದೂ ಪ್ರತಿದಿನ ಬೆಳಿಗ್ಗೆ ಬಾಗಿಲುಗಳನ್ನು ತೆರೆಯುವುದೂ ಅವರ ಕರ್ತವ್ಯವಾಗಿತ್ತು. ಆದುದರಿಂದ ಅವರು ದೇವಾಲಯದ ಹತ್ತಿರವೇ ಇರುತ್ತಿದ್ದರು.


ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವುದು; ಸೇರು, ಅಳತೆಗೋಲು ಇವುಗಳನ್ನು ಪರೀಕ್ಷಿಸುವುದು;


ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಹಾಗು ತಾನು ಒದಗಿಸಿದ್ದ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನು ದಾವೀದನು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು