Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:32 - ಕನ್ನಡ ಸತ್ಯವೇದವು C.L. Bible (BSI)

32 ಹೀಗೆ ಅವರು ತಮ್ಮ ಸಹೋದರರಾದ ಆರೋನ್ಯರ ಸಹಾಯಕರಾಗಿದ್ದು, ದೇವದರ್ಶನದ ಗುಡಾರವನ್ನೂ ಪರಿಶುದ್ಧವಾದ ಎಲ್ಲಾ ಸಾಮಾನುಗಳನ್ನೂ ನೋಡಿಕೊಳ್ಳುವುದೇ ಸರ್ವೇಶ್ವರನ ಆಲಯದಲ್ಲಿ ಅವರು ಮಾಡಬೇಕಾಗಿದ್ದ ಪರಿಚರ್ಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಹೀಗೆ ಅವರು ತಮ್ಮ ಸಹೋದರರಾದ ಆರೋನ್ಯರ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ ಪರಿಶುದ್ಧವಾದ ಎಲ್ಲಾ ಸಾಮಾನುಗಳನ್ನೂ ನೋಡಿಕೊಳ್ಳುವದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಪರಿಚರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಹೀಗೆ ಲೇವಿಯರು ತಾವು ಮಾಡಬೇಕಾದ ಕೆಲಸಗಳನ್ನೆಲ್ಲಾ ಮಾಡಿದರು. ಅವರು ಪವಿತ್ರ ಗುಡಾರವನ್ನು ಮತ್ತು ಪವಿತ್ರಸ್ಥಳವನ್ನು ನೋಡಿಕೊಂಡರು; ತಮ್ಮ ಸಂಬಂಧಿಕರೂ ಆರೋನನ ಕುಲದವರೂ ಆಗಿದ್ದ ಯಾಜಕರಿಗೆ ಸಹಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೆಹೋವ ದೇವರ ಮನೆಯ ಸೇವೆಯಲ್ಲಿ ದೇವದರ್ಶನ ಗುಡಾರದ ಕಾವಲನ್ನೂ, ಪರಿಶುದ್ಧ ಸ್ಥಾನದ ಕಾವಲನ್ನೂ, ತಮ್ಮ ಸಹೋದರರಾದ ಆರೋನನ ಪುತ್ರರ ಆಜ್ಞೆಯನ್ನೂ ಕೈಗೊಳ್ಳುವುದು ಅವರಿಗೆ ನೇಮಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:32
9 ತಿಳಿವುಗಳ ಹೋಲಿಕೆ  

ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ, ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆ ಮತ್ತು ಆರೋನನು ಹಾಗೂ ಆರೋನನ ಮಕ್ಕಳು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು. ಅವರು ಇಸ್ರಯೇಲರ ಪರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕಾಗಿತ್ತು. ಬೇರೆ ಯಾರಾದರೂ ಆ ಕೆಲಸಕ್ಕೆ ಕೈ ಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕಾಗಿತ್ತು.


ದೇವಾಲಯವನ್ನು ಕಾಯುವುದೂ ಪ್ರತಿದಿನ ಬೆಳಿಗ್ಗೆ ಬಾಗಿಲುಗಳನ್ನು ತೆರೆಯುವುದೂ ಅವರ ಕರ್ತವ್ಯವಾಗಿತ್ತು. ಆದುದರಿಂದ ಅವರು ದೇವಾಲಯದ ಹತ್ತಿರವೇ ಇರುತ್ತಿದ್ದರು.


ಉಳಿದ ಯಾಜಕರೂ ಲೇವಿಯರೂ ದೇವದರ್ಶನದ ಗುಡಾರ ಹಾಗು ಅದರಲ್ಲಿದ್ದ ಪವಿತ್ರವಸ್ತುಗಳನ್ನು ಹೊತ್ತರು.


ಅಂಥವರು ತಮ್ಮ ಸ್ವಕುಲದವರ ಜೊತೆ ದೇವದರ್ಶನದ ಗುಡಾರವನ್ನು ಕಾಯುವ ಸೇವೆ ಮಾಡಬಹುದು. ಅದೊಂದನ್ನು ಬಿಟ್ಟು ಅವರಿಂದ ಬೇರೆ ಪರಿಚರ್ಯೆಯನ್ನು ಮಾಡಿಸಕೂಡದು. ಲೇವಿಯರು ಮಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ವಿಧಿಸಬೇಕು.


ದೇವಸ್ಥಾನದ ವ್ಯವಹಾರವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು. ಆಗ ದೇವರ ಕೋಪ ಮತ್ತೆ ಇಸ್ರಯೇಲರ ಮೇಲೆ ಬಾರದು.


ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಸರ್ವೇಶ್ವರನ ಹೆಸರನ್ನು ಹೇಳಿ ತಾನೂ ಸೇವೆ ನಡೆಸಬಹುದು;


ದೇವಾಲಯದ ಸಕಲ ಸೇವೆಯಲ್ಲೂ ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು