Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:19 - ಕನ್ನಡ ಸತ್ಯವೇದವು C.L. Bible (BSI)

19 ಆರೋನ್ಯರು ಈ ವರ್ಗಕ್ರಮದಲ್ಲಿ ಸರ್ವೇಶ್ವರನ ಆಲಯಕ್ಕೆ ಬಂದು, ಲೇವಿಯರ ಮೂಲ ಪುರುಷನಾದ ಆರೋನನ ಮುಖಾಂತರ ಇಸ್ರಯೇಲ್ ದೇವರಾದ ಸರ್ವೇಶ್ವರ ನಿಯಮಿಸಿದ ಸೇವೆಯನ್ನು ನಡೆಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆರೋನ್ಯರು ಈ ವರ್ಗ ಕ್ರಮದಿಂದ ಯೆಹೋವನ ಆಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಪ್ಪತ್ತನಾಲ್ಕನೆಯದು ಮಾಜ್ಯನಿಗೆ. ಆರೋನ್ಯರು ಈ ವರ್ಗಕ್ರಮದಿಂದ ಯೆಹೋವನ ಆಲಯಕ್ಕೆ ಬಂದು, ಇಸ್ರಾಯೇಲ್ ದೇವರಾದ ಯೆಹೋವನು ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನಿಯವಿುಸಿದ ಸೇವೆಯನ್ನು ನಡಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈ ವರ್ಗದವರನ್ನು ಕ್ರಮವಾಗಿ ದೇವಾಲಯದಲ್ಲಿ ಸೇವೆಮಾಡಲು ಆರಿಸಲಾಯಿತು. ಇವರು ಆರೋನನ ಆರಾಧನಾ ಪದ್ದತಿಯನ್ನು ಅನುಸರಿಸಿದರು. ಇಸ್ರೇಲರ ದೇವರಾದ ಯೆಹೋವನು ಆರಾಧನಾ ಕ್ರಮಗಳನ್ನು ಆರೋನನಿಗೆ ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತಮ್ಮ ತಂದೆ ಆರೋನನಿಗೆ ಆಜ್ಞಾಪಿಸಿದ ಹಾಗೆ, ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ, ಯೆಹೋವ ದೇವರ ಮನೆಯಲ್ಲಿ ಸೇವೆ ಮಾಡುವುದಕ್ಕೆ ಬರಬೇಕಾದ ಅವರ ನಿಯಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:19
10 ತಿಳಿವುಗಳ ಹೋಲಿಕೆ  

ಈ ಪ್ರಮುಖ ದ್ವಾರಪಾಲಕರಿಗೆ ಗ್ರಾಮಗಳಲ್ಲಿ ನೆಲೆಸಿದ್ದ ಅವರ ಬಂಧುಗಳು ಸಹಾಯಕರಾಗಿದ್ದರು. ಅವರು ಸರದಿಯ ಮೇಲೆ ಏಳೇಳು ದಿವಸ ಬಂದು ಸಹಾಯ ಮಾಡಬೇಕಾಗಿತ್ತು.


ಇಸ್ರಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿತ್ತಾದರೆ, ಆರೋನನ ಪರಂಪರೆಗೆ ಸೇರದೆ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಕಾಣಿಸಿಕೊಳ್ಳುವ ಅವಶ್ಯಕತೆ ಏನಿತ್ತು?


ಆದರೆ ಎಲ್ಲವನ್ನು ಒಪ್ಪವಾಗಿ, ಓರಣವಾಗಿ ಮಾಡಿರಿ.


ಲೇವಿಯರೂ ಎಲ್ಲ ಯೆಹೂದ್ಯರೂ ಯಾಜಕ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್‍ದಿನದಲ್ಲಿ ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್‍ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈ ಕೆಳಗಿನವರನ್ನು ಕೂಡಿಸಿಕೊಂಡನು.


ಈಗ ನೀವು ಮಾಡತಕ್ಕದ್ದೇನೆಂದರೆ - ಸಬ್ಬತ್‍ದಿನ ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.


ಆರೋನನ ಸಂತಾನದವರನ್ನು ವರ್ಗಗಳಾಗಿ ವಿಂಗಡಿಸಲಾಗಿತ್ತು. ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ವರು ಮಕ್ಕಳಿದ್ದರು.


ಒಮ್ಮೆ ತನ್ನ ವರ್ಗದ ಸರದಿ ಬಂದಾಗ ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕ ವಿಧಿಯನ್ನು ನೆರವೇರಿಸುತ್ತಿದ್ದನು.


ಇಪ್ಪತ್ತಮೂರನೆಯದು ದೆಲಾಯನಿಗೆ; ಇಪ್ಪತ್ತನಾಲ್ಕನೆಯದು ಮಾಜ್ಯನಿಗೆ.


ಉಳಿದ ಲೇವಿಯರ ಪಟ್ಟಿ: ಅಮ್ರಾಮನ ಸಂತಾನದವನಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು,


ಎಲ್ಕಾನ, ಯೆರೋಹಾಮ, ಎಲೀಯೇಲ, ತೋಹ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು