1 ಪೂರ್ವಕಾಲ ವೃತ್ತಾಂತ 24:31 - ಕನ್ನಡ ಸತ್ಯವೇದವು C.L. Bible (BSI)31 ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ ಕಿರಿಯರೂ, ತಮ್ಮ ಕುಲಬಂಧುಗಳಾದ ಆರೋನ್ಯರಂತೆ, ಅರಸನಾದ ದಾವೀದ್, ಚಾದೋಕ್, ಅಹೀಮೆಲೆಕ್ ಇವರ ಮುಂದೆ ಹಾಗೂ ಯಾಜಕರ ಮತ್ತು ಲೇವಿಯರ ಕುಟುಂಬ ಮುಖ್ಯಸ್ಥರ ಮುಂದೆ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಇವರೆಲ್ಲಾ ಲೇವಿಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ್, ಚಾದೋಕ್, ಅಹೀಮೆಲೆಕ್ ಇವರ ಮುಂದೆಯೂ ಯಾಜಕರ ಮತ್ತು ಲೇವಿಯರ ಕುಟುಂಬಪ್ರಧಾನರ ಮುಂದೆಯೂ ಚೀಟಿನಿಂದ ತಮ್ಮಲ್ಲಿ ಸರತಿಗಳನ್ನು ನೇವಿುಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಇವರನ್ನು ವಿಶಿಷ್ಟಕಾರ್ಯಗಳಿಗಾಗಿ ಚೀಟುಹಾಕಿ ಆರಿಸಲಾಯಿತು. ಆರೋನನ ಸಂತತಿಯವರೂ ಯಾಜಕರೂ ಆಗಿದ್ದ ತಮ್ಮ ಸಂಬಂಧಿಕರು ಮಾಡಿದಂತೆಯೇ ಚೀಟುಹಾಕಿ ವಿಶಿಷ್ಟ ಕಾರ್ಯಗಳಿಗಾಗಿ ಇವರನ್ನು ಆರಿಸಿಕೊಳ್ಳಲಾಯಿತು. ರಾಜನಾದ ದಾವೀದನ, ಚಾದೋಕನ, ಅಹೀಮೆಲೆಕನ ಮತ್ತು ಲೇವಿಕುಲದ ನಾಯಕರ ಎದುರಿಗೆ ಚೀಟುಹಾಕಿದರು. ಹಿರಿಯ ಅಥವಾ ಕಿರಿಯ ಕುಟುಂಬಗಳೆನ್ನದೆ ಎಲ್ಲರಿಗೂ ಸಮಾನವಾಗಿ ಕೆಲಸಗಳನ್ನು ಹಂಚಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ, ಚಾದೋಕನು, ಅಹೀಮೆಲೆಕನು, ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ, ಆರೋನನ ಪುತ್ರರಾದ ತಮ್ಮ ಸಹೋದರರಿಗೆ ಎದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಕಿರಿಯ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು. ಅಧ್ಯಾಯವನ್ನು ನೋಡಿ |
ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಳ್ಳುತ್ತಿದ್ದರು. ಈ ಚೀಟಿನ ಪ್ರಕಾರ ಇನ್ನೂರ ಎಂಬತ್ತೆಂಟು ಮಂದಿ ಸದಸ್ಯರು ಇಪ್ಪತ್ತನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದರು. ಪ್ರತಿಯೊಂದು ಗುಂಪಿಗೆ ಒಬ್ಬ ನಾಯಕನು, ಅವನ ಸಹೋದರರು ಹಾಗೂ ಮಕ್ಕಳು ಕೂಡಿ ಹನ್ನೆರಡು ಮಂದಿ ಸದಸ್ಯರು ಇದ್ದರು. ಕ್ರಮಾನುಸಾರ ಇಪ್ಪತ್ತನಾಲ್ಕು ನಾಯಕರ ಹೆಸರುಗಳು ಇವು: