Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:4 - ಕನ್ನಡ ಸತ್ಯವೇದವು C.L. Bible (BSI)

4 ಎಲ್ಲಾಜಾರನ ಸಂತಾನದಲ್ಲಿ ಕುಟುಂಬ ಮುಖ್ಯಸ್ಥರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡುಬಂದುದರಿಂದ, ಎಲ್ಲಾಜಾರ್ಯರ ಕುಟುಂಬಗಳನ್ನು ಮುಖ್ಯಸ್ಥರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಎಲ್ಲಾಜಾರನ ಸಂತಾನದ ಕುಟುಂಬಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡುಬಂದದರಿಂದ ಎಲ್ಲಾಜಾರ್ಯರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ ಈ ವರ್ಗಗಳ ವಿಷಯವಾಗಿ ಚೀಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈತಾಮಾರನ ಸಂತತಿಗಿಂತಲೂ ಎಲ್ಲಾಜಾರನ ಸಂತತಿಯವರಲ್ಲಿ ಹೆಚ್ಚು ಮಂದಿ ನಾಯಕರಿದ್ದರು. ಎಲ್ಲಾಜಾರನ ಸಂತತಿಯವರಲ್ಲಿ ಹದಿನಾರು ಮಂದಿ ಮತ್ತು ಈತಾಮಾರನ ಸಂತತಿಯವರಲ್ಲಿ ಎಂಟು ಮಂದಿ ನಾಯಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈತಾಮಾರನ ಪುತ್ರರಿಗಿಂತ ಎಲಿಯಾಜರನ ಪುತ್ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದುದರಿಂದ, ಅವರು ಸಹ ಹೀಗೆಯೇ ವಿಭಾಗಿಸಿದ್ದರು. ಎಲಿಯಾಜರನ ಪುತ್ರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಪುತ್ರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟು ಮಂದಿ ಮುಖ್ಯಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:4
7 ತಿಳಿವುಗಳ ಹೋಲಿಕೆ  

ಲೇವಿಯರ ಪಟ್ಟಿಯಲ್ಲಿ ಬರೆದಿರುವ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಮುಖ್ಯಸ್ಥರು. ಇವರಲ್ಲಿ ಇಪ್ಪತ್ತು ವರ್ಷ ಮೊದಲ್ಗೊಂಡು ಹೆಚ್ಚು ವಯಸ್ಸುಳ್ಳವರು ಸರ್ವೇಶ್ವರನ ಆಲಯದಲ್ಲಿ ಸೇವೆಮಾಡಲು ಅರ್ಹರಾಗಿದ್ದರು.


ದಾವೀದನೂ ಎಲ್ಲಾಜಾರನ ಸಂತಾನದವನಾದ ಚಾದೋಕನೂ ಈತಾಮಾರನ ಸಂತಾನದವನಾದ ಅಹೀಮೆಲೆಕನೂ ಯಾಜಕರನ್ನು ಸರದಿಯ ಮೇಲೆ ಸೇವೆ ಸಲ್ಲಿಸತಕ್ಕ ವರ್ಗಗಳನ್ನಾಗಿ ವಿಭಾಗಿಸಿದ್ದರು.


ಈ ವರ್ಗಗಳ ವಿಷಯವಾಗಿ ಚೀಟುಹಾಕಿ ಕೆಲಸವನ್ನು ವಹಿಸುತ್ತಿದ್ದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಯಲಯದ ಅಧಿಪತಿಗಳೂ ದೈವಿಕ ಕಾರ್ಯಗಳ ಅಧ್ಯಕ್ಷರೂ ಇದ್ದುದರಿಂದ ಉಭಯ ಸಂತಾನಗಳವರು ಸಮಾನ ಸ್ಥಾನದವರಾಗಿದ್ದರು.


ಅವನು ತನ್ನ ಸಹಸ್ರಾಧಿಪತಿಗಳನ್ನು, ಶತಾಧಿಪತಿಗಳನ್ನು, ಸರಕಾರದ ಎಲ್ಲ ಪದಾಧಿಕಾರಿಗಳನ್ನು ಹಾಗೂ ಇಸ್ರಯೇಲ್ ಕುಲಗೋತ್ರಗಳ ನಾಯಕರನ್ನು ಬರಮಾಡಿ, ಅವರ ಸಮೇತ ಗಿಬ್ಯೋನಿನಲ್ಲಿದ್ದ ಪೂಜಾಸ್ಥಳಕ್ಕೆ ಹೋದನು.


ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - ಯಾಜಕ ಗೋತ್ರ ಮೆರಾಯ ಸೆರಾಯ ಹನನ್ಯ ಯೆರೆಮೀಯ ಮೆಷುಲ್ಲಾಮ್ ಎಜ್ರ ಯೆಹೋಹಾನಾನ್ ಅಮರ್ಯ ಯೋನಾತಾನ್ ಮಲ್ಲೂಕಿ ಜೋಸೇಫ್ ಶೆಬನ್ಯ ಅದ್ನ ಹಾರಿಮ ಹೆಲ್ಕೈ ಮೆರಾಯೋತ ಜಕರ್ಯ ಇದ್ದೋ ಮೆಷುಲ್ಲಾಮ್ ಗಿನ್ನೆತೋನ ಜೆಕ್ರೀ ಅಬೀಯ ಪಿಲ್ಟೈ ಮಿನ್ಯಾಮೀನ್ ಮತ್ತು ಮೋವದ್ಯ ಶಮ್ಮೂವ ಬಿಲ್ಗಾ ಯೆಹೋನಾತಾನ್ ಶೆಮಾಯ ಮತ್ತೆನೈ ಯೋಯಾರೀಬ ಉಜ್ಜೀ ಯೆದಾಯ ಕಲ್ಲೈ ಸಲ್ಲೈ ಏಬೆರ್ ಆಮೋಕ ಹಷಬ್ಯ ಹಿಲ್ಕೀಯ ನೆತನೇಲ್ ಯೆದಾಯ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು