1 ಪೂರ್ವಕಾಲ ವೃತ್ತಾಂತ 24:5 - ಕನ್ನಡ ಸತ್ಯವೇದವು C.L. Bible (BSI)5 ಈ ವರ್ಗಗಳ ವಿಷಯವಾಗಿ ಚೀಟುಹಾಕಿ ಕೆಲಸವನ್ನು ವಹಿಸುತ್ತಿದ್ದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಯಲಯದ ಅಧಿಪತಿಗಳೂ ದೈವಿಕ ಕಾರ್ಯಗಳ ಅಧ್ಯಕ್ಷರೂ ಇದ್ದುದರಿಂದ ಉಭಯ ಸಂತಾನಗಳವರು ಸಮಾನ ಸ್ಥಾನದವರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯಾಧಿಪತಿಗಳೂ ದೈವಿಕಕಾರ್ಯಗಳ ಅಧ್ಯಕ್ಷರೂ ಇರುವದರಿಂದ ಉಭಯ ಸಂತಾನಗಳವರು ಸಮಾನಸ್ಥಾನದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಪ್ರತಿಯೊಂದು ಕುಲದಿಂದ ಚೀಟುಹಾಕುವುದರ ಮೂಲಕ ಜನರನ್ನು ಆರಿಸಿಕೊಳ್ಳಲಾಯಿತು. ಕೆಲವರನ್ನು ಪವಿತ್ರ ಸ್ಥಳದ ಸೇವೆಗಾಗಿ ಆರಿಸಿಕೊಳ್ಳಲಾಯಿತು; ಇನ್ನು ಕೆಲವರನ್ನು ಯಾಜಕರಾಗಿ ಸೇವೆಮಾಡಲು ಆರಿಸಿಕೊಳ್ಳಲಾಯಿತು; ಇವರೆಲ್ಲರೂ ಎಲ್ಲಾಜಾರ್ ಮತ್ತು ಈತಾಮಾರನ ಕುಲದವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇವರು ಸಹ ಚೀಟುಹಾಕುವ ಮೂಲಕ ನಿಷ್ಪಕ್ಷಪಾತವಾಗಿ ವಿಭಾಗವಾಗಿದ್ದರು. ಏಕೆಂದರೆ ಪರಿಶುದ್ಧ ಸ್ಥಾನದ ಪ್ರಧಾನರೂ, ದೇವರ ಪ್ರಧಾನರೂ ಎಲಿಯಾಜರನ ಪುತ್ರರೂ, ಈತಾಮಾರನ ಪುತ್ರರೂ ಇದ್ದರು. ಅಧ್ಯಾಯವನ್ನು ನೋಡಿ |
ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಳ್ಳುತ್ತಿದ್ದರು. ಈ ಚೀಟಿನ ಪ್ರಕಾರ ಇನ್ನೂರ ಎಂಬತ್ತೆಂಟು ಮಂದಿ ಸದಸ್ಯರು ಇಪ್ಪತ್ತನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದರು. ಪ್ರತಿಯೊಂದು ಗುಂಪಿಗೆ ಒಬ್ಬ ನಾಯಕನು, ಅವನ ಸಹೋದರರು ಹಾಗೂ ಮಕ್ಕಳು ಕೂಡಿ ಹನ್ನೆರಡು ಮಂದಿ ಸದಸ್ಯರು ಇದ್ದರು. ಕ್ರಮಾನುಸಾರ ಇಪ್ಪತ್ತನಾಲ್ಕು ನಾಯಕರ ಹೆಸರುಗಳು ಇವು: