1 ಪೂರ್ವಕಾಲ ವೃತ್ತಾಂತ 25:1 - ಕನ್ನಡ ಸತ್ಯವೇದವು C.L. Bible (BSI)1 ದಾವೀದನು ಹಾಗೂ ಆರಾಧಕ ಮಂಡಲಿಯ ಮುಖ್ಯಸ್ಥರು ಕಿನ್ನರಿ, ಸ್ವರಮಂಡಲ, ತಾಳ ಇವುಗಳನ್ನು ಬಾರಿಸುತ್ತಾ, ಪರವಶರಾಗಿ ಗಾಯನ ಸೇವೆ ಮಾಡುವುದಕ್ಕಾಗಿ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡಬೇಕಾಗಿದ್ದ ಪುರುಷರ ಪಟ್ಟಿ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಮೇಲೆ ದಾವೀದನೂ ಆರಾಧಕಮಂಡಲಿಯವರ ಪ್ರಧಾನರೂ ಕಿನ್ನರಿ ಸ್ವರಮಂಡಲ ತಾಳ ಇವುಗಳನ್ನು ಬಾರಿಸುತ್ತಾ ಪರವಶರಾಗಿ ಗಾಯನ ಸೇವೆಮಾಡುವದಕ್ಕೋಸ್ಕರ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದಾವೀದನೂ ಸೇನಾಪತಿಗಳೂ ಆಸಾಫನ ಸಂತತಿಯವರನ್ನು ವಿಶೇಷವಾದ ಸೇವೆಗೆ ಪ್ರತ್ಯೇಕಿಸಿದರು. ಆಸಾಫನ ಗಂಡುಮಕ್ಕಳು ಹೇಮಾನ್ ಮತ್ತು ಯೆದುತೂನ್. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸುತ್ತಾ ದೇವರ ಸಂದೇಶವನ್ನು ಪ್ರವಾದಿಸುವುದೇ ಇವರ ಸೇವೆಯಾಗಿತ್ತು. ಈ ರೀತಿಯಾಗಿ ದೇವರ ಸೇವೆಯನ್ನು ಮಾಡಿದವರು ಯಾರೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇದಲ್ಲದೆ ದಾವೀದನೂ, ಸೈನ್ಯಾಧಿಪತಿಗಳೂ ಆಸಾಫ್, ಹೇಮಾನ್, ಯೆದುತೂನ್; ಇವರ ಪುತ್ರರಲ್ಲಿ ಕಿನ್ನರಿಗಳಿಂದಲೂ, ವೀಣೆಗಳಿಂದಲೂ, ತಾಳಗಳಿಂದಲೂ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರವಾಗಿತ್ತು. ಅಧ್ಯಾಯವನ್ನು ನೋಡಿ |
ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತೂರಿಗಳನ್ನು ಊದುವವರು ಅರಸನ ಹತ್ತಿರವಿದ್ದರು; ಜನಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನಪದ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆ ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.