1 ಪೂರ್ವಕಾಲ ವೃತ್ತಾಂತ 25:2 - ಕನ್ನಡ ಸತ್ಯವೇದವು C.L. Bible (BSI)2 ಆಸಾಫ್ಯರಲ್ಲಿ ಜಕ್ಕೂರ್, ಜೋಸೆಫ್, ನೆತನ್ಯ, ಅಶರೇಲ ಎಂಬವರು. ಇವರು ಆಸ್ಥಾನದ ಗಾಯಕ ಆಸಾಫನ ಸಹಾಯಕರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಸಾಫ್ಯರಲ್ಲಿ ಜಕ್ಕೂರ್, ಯೋಸೇಫ್, ನೆತನ್ಯ, ಅಶರೇಲ ಎಂಬವರು. ಇವರು ಅರಮನೆಯ ಗಾಯಕನಾದ ಆಸಾಫನ ಸಹಾಯಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಸಾಫ್ಯರಲ್ಲಿ ಜಕ್ಕೂರ್, ಯೋಸೇಫ್, ನೆತನ್ಯ, ಅಶರೇಲ ಎಂಬವರು. ಇವರು ಅರಮನೆಯ ಗಾಯಕನಾದ ಆಸಾಫನ ಸಹಾಯಕರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಸಾಫನ ಸಂತತಿಯಲ್ಲಿ: ಜಕ್ಕೂರ್, ಯೋಸೇಫ್, ನೆತನ್ಯ ಮತ್ತು ಅಶರೇಲ, ಅರಸನಾದ ದಾವೀದನು ಆಸಾಫನನ್ನು ಪ್ರವಾದಿಸುವುದಕ್ಕಾಗಿ ಆರಿಸಿಕೊಂಡನು. ಆಸಾಫನು ತನ್ನ ಮಕ್ಕಳಿಗೂ ಮಾರ್ಗದರ್ಶನ ನೀಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ಯಾರೆಂದರೆ: ಆಸಾಫನ ಪುತ್ರರಲ್ಲಿ ಜಕ್ಕೂರ್, ಯೋಸೇಫ, ನೆತನ್ಯ, ಅಶರೇಲ; ಇವರು ಆಸಾಫನ ಕೈಕೆಳಗೆ ಪ್ರವಾದಿಸಿದರು. ಇವರು ಅರಸನ ಮೇಲ್ವಿಚಾರಣೆಯಲ್ಲಿದ್ದರು. ಅಧ್ಯಾಯವನ್ನು ನೋಡಿ |
ಗಾಯಕರ ಮಂಡಳಿಯಿಂದ ಕಂಚಿನ ತಾಳಗಳನ್ನು ಬಾರಿಸಲು ಆಯ್ಕೆಹೊಂದಿದವರು: ಯೋವೇಲನ ಮಗ ಹೇಮಾನ್, ಅವನ ಬಂಧು ಬೆರೆಕ್ಯನ ಮಗ ಆಸಾಫ್, ಮೆರಾರೀ ಕುಟುಂಬಕ್ಕೆ ಸೇರಿದ ಕೂಷಾಯನ ಮಗ ಏತಾನ್ ಎಂಬವರು. ತಮಗೆ ಸಹಾಯ ಮಾಡಲು ತಾರಸ್ಥಾಯಿಯ ತಂತಿವಾದ್ಯಗಳನ್ನು ಬಾರಿಸಲು ಜೆಕರ್ಯ, ಬೇನ್, ಯಾಜೀಯೇಲ್, ಶಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ ಹಾಗು ಮಸೇಯ ಎಂಬವರನ್ನು ಆರಿಸಿಕೊಂಡರು. ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸಲು ಮತಿತ್ಯ, ಎಲೀಫೆಲೇಹು, ಮಿಕ್ನೇಯ, ದೇವಾಲಯದ ದ್ವಾರಪಾಲಕರಾದ ಓಬೇದೆದೋಮ್ ಮತ್ತು ಯೆಗೀಯೇಲರನ್ನೂ ನೇಮಿಸಿಕೊಂಡರು.
ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಳ್ಳುತ್ತಿದ್ದರು. ಈ ಚೀಟಿನ ಪ್ರಕಾರ ಇನ್ನೂರ ಎಂಬತ್ತೆಂಟು ಮಂದಿ ಸದಸ್ಯರು ಇಪ್ಪತ್ತನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದರು. ಪ್ರತಿಯೊಂದು ಗುಂಪಿಗೆ ಒಬ್ಬ ನಾಯಕನು, ಅವನ ಸಹೋದರರು ಹಾಗೂ ಮಕ್ಕಳು ಕೂಡಿ ಹನ್ನೆರಡು ಮಂದಿ ಸದಸ್ಯರು ಇದ್ದರು. ಕ್ರಮಾನುಸಾರ ಇಪ್ಪತ್ತನಾಲ್ಕು ನಾಯಕರ ಹೆಸರುಗಳು ಇವು: