1 ಪೂರ್ವಕಾಲ ವೃತ್ತಾಂತ 25:6 - ಕನ್ನಡ ಸತ್ಯವೇದವು C.L. Bible (BSI)6 ದೇವರಾದ ಸರ್ವೇಶ್ವರನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನಮಾಡುತ್ತಿದ್ದರು. ಆಸಾಫ್ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹೇಮಾನನು ತನ್ನ ಮಕ್ಕಳೆಲ್ಲರನ್ನು ದೇವಾಲಯದಲ್ಲಿ ಹಾಡುವದಕ್ಕಾಗಿ ಬಳಸಿಕೊಂಡನು. ಅವರು ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ತಾಳಗಳನ್ನೂ ಬಾರಿಸಿದರು. ಹೀಗೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಅರಸನಾದ ದಾವೀದನು ಅವರನ್ನು ಆರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ, ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಹೀಗೆ ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು. ಅಧ್ಯಾಯವನ್ನು ನೋಡಿ |
ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತೂರಿಗಳನ್ನು ಊದುವವರು ಅರಸನ ಹತ್ತಿರವಿದ್ದರು; ಜನಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನಪದ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆ ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.