ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಳ್ಳುತ್ತಿದ್ದರು. ಈ ಚೀಟಿನ ಪ್ರಕಾರ ಇನ್ನೂರ ಎಂಬತ್ತೆಂಟು ಮಂದಿ ಸದಸ್ಯರು ಇಪ್ಪತ್ತನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದರು. ಪ್ರತಿಯೊಂದು ಗುಂಪಿಗೆ ಒಬ್ಬ ನಾಯಕನು, ಅವನ ಸಹೋದರರು ಹಾಗೂ ಮಕ್ಕಳು ಕೂಡಿ ಹನ್ನೆರಡು ಮಂದಿ ಸದಸ್ಯರು ಇದ್ದರು. ಕ್ರಮಾನುಸಾರ ಇಪ್ಪತ್ತನಾಲ್ಕು ನಾಯಕರ ಹೆಸರುಗಳು ಇವು:
ದಾವೀದನು ಹಾಗೂ ಆರಾಧಕ ಮಂಡಲಿಯ ಮುಖ್ಯಸ್ಥರು ಕಿನ್ನರಿ, ಸ್ವರಮಂಡಲ, ತಾಳ ಇವುಗಳನ್ನು ಬಾರಿಸುತ್ತಾ, ಪರವಶರಾಗಿ ಗಾಯನ ಸೇವೆ ಮಾಡುವುದಕ್ಕಾಗಿ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡಬೇಕಾಗಿದ್ದ ಪುರುಷರ ಪಟ್ಟಿ: