Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:1 - ಕನ್ನಡ ಸತ್ಯವೇದವು C.L. Bible (BSI)

1 ದೇವಾಲಯದ ಕಾವಲುಗಾರರಾಗಿ ಸೇವೆಮಾಡಲು ನೇಮಕಗೊಂಡ ಲೇವಿಯರ ಹೆಸರುಗಳು: ಕೋರಹೀಯನಾದ ಮೆಷೆಲೆಮ್ಯ; ಇವನು ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ: ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದ್ವಾರಪಾಲಕವರ್ಗಗಳ ವಿಷಯ ಕೋರಹೀಯನಾದ ಮೆಷೆಲೆಮ್ಯ ಎಂಬವನು ಕೊರೇಯನ ಮಗನೂ ಆಸಾಫನ ಮೊಮ್ಮಗನೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೋರಹಿಯ ವಂಶದವರಲ್ಲಿ ದ್ವಾರಪಾಲಕರು ಯಾರೆಂದರೆ: ಮೆಷೆಲೆಮ್ಯ ಮತ್ತು ಅವನ ಗಂಡುಮಕ್ಕಳು. (ಮೆಷೆಲೆಮ್ಯನು ಕೋರಹಿಯನ ಮಗ. ಕೋರಹಿಯನು ಆಸಾಫನ ಕುಲದವನಾಗಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದ್ವಾರಪಾಲಕರ ವರ್ಗಗಳು: ಕೋರಹಿಯರೊಳಗೆ: ಆಸಾಫನ ಪುತ್ರರಲ್ಲಿ ಒಬ್ಬನಾಗಿರುವ ಕೋರೆಯ ಮಗನಾದ ಮೆಷೆಲೆಮ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:1
15 ತಿಳಿವುಗಳ ಹೋಲಿಕೆ  

ಸರ್ವಜನಾಂಗಗಳೆ, ಗಮನಿಸಿರಿ I ಭೂನಿವಾಸಿಗಳೆ, ನನಗೆ ಕಿವಿಗೊಡಿ II


ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


ಯಾವ ವಿಧದಲ್ಲಾದರೂ ಅಶುದ್ಧನಾದವನು ಸರ್ವೇಶ್ವರನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.


ಇಪ್ಪತ್ತನಾಲ್ಕನೆಯವನು ರೋಮಮ್ತಿಯೆಜೆರ್.


ಮೆಷಲೆಮ್ಯನ ಮಕ್ಕಳಲ್ಲಿ ಜೆಕರ್ಯನು ಚೊಚ್ಚಲನು; ಎದೀಯಯೇಲನು ಮರಚಲನು; ಜೆಬದ್ಯನು ಮೂರನೆಯವನು; ಯೆತ್ನಿಯೇಲನು ನಾಲ್ಕನೆಯವನು.


ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.


ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪರವಾಗಿ ದಹನ ಬಲಿಪಶುವನ್ನೂ ಶಾಂತಿಸಮಾಧಾನ ಬಲಿಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು.


ಜೆರುಸಲೇಮಿನಲ್ಲಿ ನೆಲೆಸಿದ ಲೇವಿಯರು: ಹಷಬ್ಯನ ಮಗ ಶೆಮಾಯ; ಇವನ ಪೂರ್ವಜರಲ್ಲಿ ಅಜ್ರೀಕಾಮ, ಹಷಬ್ಯ ಹಾಗು ಮೆರಾರೀ ಗೋತ್ರದ ಬಕ್ಬಕ್ಕರ್, ಹೆರೆಷ್, ಗಾಲಾಲ್ ಎಂಬವರಿದ್ದರು. ಶೆಮಾಯನ ಮಗ ಓಬದ್ಯ: ಇವನ ಪೂರ್ವಜರಲ್ಲಿ ಗಾಲಾಲ, ಯದೂತೂನ ಎಂಬವರಿದ್ದರು. ಮೀಕನ ಮಗ ಮತ್ತನ್ಯ: ಇವನ ಪೂರ್ವಜರಲ್ಲಿ ಜಿಕ್ರೀ, ಆಸಾಫ ಎಂಬವರಿದ್ದರು. ಆಸನ ಮಗನೂ ಎಲ್ಕಾನನ ಮೊಮ್ಮಗನೂ ಆದ ಬೆರೆಕ್ಯ; ನಟೋಫಾತ್ಯರ ಗ್ರಾಮಗಳಲ್ಲಿ ಇವನು ನೆಲೆಸಿದ್ದನು.


ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಹಾಗು ತಾನು ಒದಗಿಸಿದ್ದ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನು ದಾವೀದನು ನೇಮಿಸಿದನು.


ಮೆಷೆಲಿಮ್ಯನ ಮಕ್ಕಳೂ ಸಹೋದರರೂ ಹದಿನೆಂಟು ಮಂದಿ; ಇವರೂ ಸಮರ್ಥರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು